ವಿಆರ್​ಎಲ್​ ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ ಅವರಿಗೆ ಗೌರವ ಡಾಕ್ಟರೇಟ್​​: ಏ.25ರಂದು ಪ್ರದಾನ

Anand sankeshwara
Published on

ಮೈಸೂರು: ವಿ.ಆರ್.ಎಲ್. ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಕಟಿಸಿದೆ.

ಬೆಂಗಳೂರಿನ ಆರ್.ವಿ. ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಎ.ವಿ.ಎಸ್.ಮೂರ್ತಿ, ಟಾಟಾ ಗ್ಲೋಬಲ್ ಸಂಪನ್ಮೂಲ ನಿರ್ವಹಣಾ ಸೇವಾ ಸಂಸ್ಥೆ ಮುಖ್ಯಸ್ಥ ಇ.ಎಸ್.ಚಕ್ರವರ್ತಿ ಅವರನ್ನೂ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಿದೆ.

ಏ. 25ರಂದು ಬೆಳಗ್ಗೆ 11.30ಕ್ಕೆ ನಡೆಯುವ ಘಟಿಕೋತ್ಸವ ಸಮಾರಂಭದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ರಾಜ್ಯಪಾಲರೂ ಆಗಿರುವ ಕುಲಾಧಿಪತಿ ಥಾವರ್ ಚಂದ್ ಗೆಹಲೋತ್​ ಘಟಿಕೋತ್ಸವದ ಅಧ್ಯಕ್ಷತೆ ವಹಿಸುವರು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ  ಉಪಸ್ಥಿತರಿರುವರು. ರಾಜ್ಯ ಸರಕಾರದ ಮಾಹಿತಿ ತಂತ್ರಜ್ಞಾನ ನಿರ್ದೇಶಕ ಎ.ಬಿ.ಬಸವರಾಜು ಘಟಿಕೋತ್ಸವ ಭಾಷಣ ಮಾಡುವರು ಎಂದು ಮುಕ್ತ ವಿವಿ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net