

ಗುವಾಹಟಿ: ಮದ್ಯ ಸೇವನೆ ಮಾಡುವ ಪೊಲೀಸ್ ಅಧಿಕಾರಿಗಳಿಗೆ ಅಸ್ಸಾಂ ಸರ್ಕಾರ ಶಾಕ್ ನೀಡಿದ್ದು ಅಚ್ಚರಿಯ ನಿರ್ಧಾರವನ್ನು ಪ್ರಕಟಿಸಿದೆ.
ಈ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಈಗಾಗಲೇ ಪ್ರಕ್ರಿಯೆ ಆರಂಭವಾಗಿದ್ದು ಶೀಘ್ರದಲ್ಲಿಯೇ ಹೊಸ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
300ಕ್ಕೂ ಹೆಚ್ಚು ಪೊಲೀಸರು ಕುಡಿತದ ಚಟದಿಂದಾಗಿ ತಮ್ಮ ದೇಹವನ್ನು ಹಾಳು ಮಾಡಿಕೊಂಡಿದ್ದು ಸರ್ಕಾರವೇ ಅವರಿಗೆ ಸ್ವಯಂ ನಿವೃತ್ತಿ ಯೋಜನೆ(VRS) ಘೋಷಿಸಿದೆ. ಇದು ಹಳೆಯ ನಿಯಮವಾಗಿದ್ದು ನಾವು ಅದನ್ನು ಜಾರಿಗೆ ತಂದಿರಲಿಲ್ಲ ಎಂದು ಹೇಳಿದ್ದಾರೆ.
ಆಡಳಿತ ವಿಕೇಂದ್ರಿಕರಣದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳ ಕಚೇರಿಗೆ ನೀಡಲಾಗಿರುವ ಅಧಿಕಾರವನ್ನು ಹೊಂದುವಂತೆ 126 ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರಿ ಕಚೇರಿ ತೆರೆಯಲಾಗುವುದು ಎಂದು ತಿಳಿಸಿದ್ದಾರೆ.
ಜನರಿಗೆ ಓಡಾಟದ ಹೊರೆ ತಗ್ಗಿಸಲು ನಾವು ಈ ಕ್ರಮವನ್ನು ಕಯಗೊಂಡಿದ್ದೇವೆ ಮತ್ತು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನಾವು ಸರ್ಕಾರಿ ಸೇವೆಗಳು ಲಭ್ಯ ಇರುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.
ಜಿಲ್ಲಾಧಿಕಾರಿಗಳೊಗೆ ಕಾನೂನು ಸುವ್ಯವಸ್ಥೆಯ ಜೊತೆಜೊತೆಗೆ ಬೇರೆ ಜವಾಬ್ದಾರಿಗಳನ್ನು ವಹಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ತಿಳಿಸಿದ್ದಾರೆ.