ವಿ.ಎಸ್.ಕವೀಶ್ ರಾಜ್ಯ ಮಟ್ಟಕ್ಕೆ ಆಯ್ಕೆ

HUN-OCT-12-2(V S KAVEESH)
ವಿ.ಎಸ್.ಕವೀಶ್.
Published on

ಹುಣಸೂರು: ಉಡುಪಿಯ ಹೆಬ್ರಿಯಲ್ಲಿ ಇತ್ತೀಚೆಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜನೆಗೊಂಡಿದ್ದ ವಿಭಾಗ ಮಟ್ಟದ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ತಾಲೂಕಿನ ಕಡೆಮನುಗನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ವೀರೇಶ್ ಅವರ ಪುತ್ರ ವಿ.ಎಸ್.ಕವೀಶ್ ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅಲ್ಲದೆ ಇದೇ ಪ್ರಥಮ ಬಾರಿಗೆ ಆಯೋಜಿಸಿದ್ದ ಯೋಗಕುಮಾರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಕವೀಶ್ ಮೈಸೂರಿನ ವಿವೇಕಾನಂದ ಯೋಗ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಗುರುಗಳಾದ ಡಾ.ಪಿ.ಎನ್.ಗಣೇಶ್‌ಕುಮಾರ್ ಮಾರ್ಗದರ್ಶನದಲ್ಲಿ ಕಳೆದ 6 ವರ್ಷಗಳಿಂದ ಯೋಗಾಭ್ಯಾಸ ಕಲಿಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net