

ಬೆಳಗಾವಿ : ಆ.1ರಂದು ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನಮುಕ್ತ ದಿನವನ್ನಾಗಿ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು, ಮಧ್ಯಪಾನ, ಮಾದಕದ್ರವ್ಯ ಹಾಗೂ ತಂಬಾಕು ಸೇವನೆಯಿಂದ ದುಷ್ಪರಿಣಾಮಗಳ ಕಾರ್ಯಕ್ರಮ ಹಮ್ಮಿಕೊಂಡು ಅರಿವು ಮೂಡಿಸಬೇಕು ಎಂದು ಡಿಡಿಪಿಐ ಬಸವರಾಜ ನಾಲತವಾಡ ತಿಳಿಸಿದ್ದಾರೆ.
ವ್ಯಸನ ಮುಕ್ತ ದಿನಾಚರಣೆಗೆ ಬೆಳಗಾವಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವ್ಯಾಪ್ತಿಯಲ್ಲಿನ ಶಾಲೆಗಳಿಂದ 100 ಮಕ್ಕಳಿಂದ ಸಾರ್ವಜನಿಕರಿಗೆ ಹಾಗೂ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು ಎಂದು ಶಿಕ್ಷಣಾಧಿಕಾರಿಗೆ ಸೂಚಿಸಿದ್ದಾರೆ.