ಕಳೆದ ಎರಡು-ಮೂರು ದಿನಗಳಿಂದ ಮಾತ್ರ ಅಲ್ಪ ಪ್ರಮಾಣದಲ್ಲಿ ಮಳೆಯಾಗಿದೆ. ಆದರೆ, ಅದು ಉಪಯೋಗವಿಲ್ಲ, ಬರಗಾಲದ ಹಿನ್ನೆಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಸಮಸ್ಯೆ ಗಂಭೀರವಾಗಿದೆ. ಸರ್ಕಾರ ತಕ್ಷಣ ಪರ್ಯಾಯ ಬೆಳೆ ಬೀಜ, ರಸಗೊಬ್ಬರ, ಹನಿ ನೀರಾವರಿ, ಬೆಳೆ ವಿಮೆ, ಮೇವು ಬ್ಯಾಂಕ್ ಹಾಗೂ ಕುಡಿಯುವ ನೀರಿನ ಯೋಜನೆಗಳನ್ನು ಜಾರಿಗೊಳಿಸಬೇಕು. ಮೇವು ಬ್ಯಾಂಕ್ ಸ್ಥಾಪನೆ ಸೇರಿದಂತೆ ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.