ಹನುಮನಪುರ ಗ್ರಾಮದಲ್ಲಿ ಧಾರಾಕಾರ ಮಳೆಗೆ ಕುಸಿದ ಗೋಡೆ

Oplus_16908288
ನಂಜನಗೂಡು ತಾಲೂಕು ಹನುಮನಪುರ ಗ್ರಾಮದಲ್ಲಿ ಧಾರಾಕಾರ ಮಳೆಗೆ ಸಿದ್ದರಾಜು ಅವರಿಗೆ ಸೇರಿದ ಮನೆ ಗೋಡೆ ಕುಸಿದಿರುವುದು.
Published on

ನಂಜನಗೂಡು: ತಾಲೂಕಿನ ಹನುಮನಪುರ ಗ್ರಾಮದಲ್ಲಿ ಬುಧವಾರ ರಾತ್ರಿ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗ್ರಾಮದ ಸಿದ್ದರಾಜು ಎಂಬುವರಿಗೆ ಸೇರಿದ ಮನೆಯಾಗಿದ್ದು, ಎರಡು ಮೂರು ದಿನಗಳಿಂದ ನಿರಂತರವಾಗಿ ಎಡೆಬಿಡದೆ ಸುರಿಯುತ್ತಿರುವ ಕಾರಣ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ಬುಧವಾರ ರಾತ್ರಿ ಸುರಿದ ಮಳೆಗೆ ಸಿದ್ದರಾಜು ಅವರ ಮನೆಯ ಗೋಡೆ ಕುಸಿದಿದ್ದು, ಮನೆಯಲ್ಲಿದ್ದ ಕುಟುಂಬದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಗೋಡೆ ಕುಸಿದ ಪರಿಣಾಮ ಮನೆಯಲ್ಲಿದ್ದ ದವ-ಧಾನ್ಯಗಳು, ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಯಾಗಿದ್ದು, ನಷ್ಟ ಉಂಟಾಗಿದೆ. ಕೂಡಲೇ ಸರ್ಕಾರ ಪರಿಹಾರ ನೀಡಬೇಕು ಎಂದು ಸಿದ್ದರಾಜು ಮನವಿ ಮಾಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಎಂ.ಪಿ ರಾಜಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನೆ ಕುಸಿದಿರುವ ಬಗ್ಗೆ ವರದಿಯನ್ನು ತಹಸೀಲ್ದಾರ್ ಅವರಿಗೆ ಕಳುಹಿಸಲಾಗುವುದು. ನಂತರ ಸರ್ಕಾರದಿಂದ ಅವರಿಗೆ ಸೂಕ್ತ ಪರಿಹಾರ ಕಲ್ಪಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net