ಮಹಿಳೆಯರ ಅಭಿವೃದ್ಧಿಗಾಗಿಯೇ ವಕ್ಫ್ ಕಾಯ್ದೆಗೆ ತಿದ್ದುಪಡಿ: ಖುಷ್ಬೂ

khushbu
Published on

ಚೆನ್ನೈ: ಮಹಿಳೆಯರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಕ್ಫ್ ಬೋರ್ಡ್ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ನಟಿ ಖುಷ್ಬೂ ಹೇಳಿದ್ದಾರೆ.

ಮುಸಲ್ಮಾನರು ತಲೆಮಾರುಗಳಿಂದ ಧರ್ಮ, ಮುತಾಲಾಕ್ ಹೆಸರಿನಲ್ಲಿ ಮಹಿಳೆಯರನ್ನು ಗುಲಾಮರಂತೆ ಕಂಡಿದ್ದಾರೆ. ಮಹಿಳೆಯರು ಯಾವುದೇ ವರ್ಗದಲ್ಲಿ ಅಭಿವೃದ್ಧಿ ಹೊಂದಿದರೆ ಮಾತ್ರ ಸಮಾಜ ಆರೋಗ್ಯವಾಗಿರುತ್ತದೆ ಎಂದು ಶನಿವಾರ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುತಾಲಾಖ್ ಕಾಯ್ದೆಯನ್ನು ನಿಷೇಧಿಸಿ ಮುಸ್ಲಿಂ ಮಹಿಳೆಯರಿಗೆ ಸ್ವಾತಂತ್ರ್ಯ ನೀಡುವುದರ ಜೊತೆಗೆ ಆಸ್ತಿಯಲ್ಲೂ ಸಮಾನ ಹಕ್ಕನ್ನು ಅನ್ವಯಿಸಿದೆ ಎಂದು ಹೇಳಿದರು.

ಗುರುವಾರ ಸಂಸತ್ತಿನಲ್ಲಿ ಮಂಡಿಸಲಾದ ವಕ್ಫ್ ಬೋರ್ಡ್ ತಿದ್ದುಪಡಿ ವಿಧೇಯಕವನ್ನೂ ಮುಸ್ಲಿಂ ಧಾರ್ಮಿಕ ಮುಖಂಡರೊಂದಿಗೆ ಚರ್ಚಿಸಿ ತರಲಾಗಿದೆ. ಆದರೆ ವಿರೋಧ ಪಕ್ಷಗಳು ಈ ಮಸೂದೆಯನ್ನು ರಾಜಕೀಯವಾಗಿ ಪರಿಗಣಿಸಿ ವಿರೋಧಿಸುವುದು ಸರಿಯಲ್ಲ ಎಂದು ಖುಷ್ಬೂ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net