VIDEO | ಡಿಎಂಕೆ ಪಕ್ಷಕ್ಕೆ ಮುನ್ನಡೆ : ಬೀದಿಗಿಳಿದು ಸಂಭ್ರಮ ಆಚರಿಸಿದ ಬೆಂಬಲಿಗರು

dmk
Published on

ಚೆನ್ನೈ : ತಮಿಳುನಾಡಿನಲ್ಲಿ ಡಿಎಂಕೆ ಪಕ್ಷವು 118 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದೆ ಎಂಬ ಅಧಿಕೃತ ಮಾಹಿತಿಯ ಹಿನ್ನೆಲೆಯಲ್ಲಿ ಪಕ್ಷದ ಬೆಂಬಲಿಗರು ಚೆನ್ನೈನಲ್ಲಿ ಬೀದಿಗಿಳಿದು ವಿಜಯೋತ್ಸವ ಆಚರಿಸುತ್ತಿದ್ದಾರೆ.

ಪಕ್ಷದ ಮುಖ್ಯ ಕಾರ್ಯಾಲಯದ ಮುಂದೆ ಮಹಿಳಾ ಕಾರ್ಯಕರ್ತರು ಒಬ್ಬರಿಗೊಬ್ಬರು ಸಿಹಿ ತಿನ್ನಿಸುತ್ತಿರುವ ಮತ್ತು ಪುರುಷರು ಪಟಾಕಿ ಹೊಡೆದು ಸಂಭ್ರಮಿಸುತ್ತಿರುವ ದೃಶ್ಯಗಳನ್ನು ಎಎನ್​ಐ ಸುದ್ದಿ ಸಂಸ್ಥೆ ಸೆರೆ ಹಿಡಿದಿದೆ.

ದೇಶದಲ್ಲಿ ಕರೊನಾ ಮಿತಿಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗವು ಯಾವುದೇ ಅಭ್ಯರ್ಥಿಗಳು ಮೆರವಣಿಗೆ ಮುಂತಾದ ರೀತಿಯಲ್ಲಿ ವಿಜಯೋತ್ಸವ ಆಚರಿಸುವ ಹಾಗಿಲ್ಲ ಎಂದು ತಾಕೀತು ಮಾಡಿದೆ. ಆದರೆ ಚುನಾವಣಾ ಫಲಿತಾಂಶವನ್ನು ಉತ್ಸಾಹದಿಂದ ಎದುರು ನೋಡುತ್ತಿರುವ ರಾಜಕೀಯ ಕಾರ್ಯಕರ್ತರು ಹಲವೆಡೆ ಮಾಸ್ಕ್​ಗಳನ್ನೂ ತೊಡದೆ ಗುಂಪು ಸೇರಿದ್ದಾರೆ ಎನ್ನಲಾಗಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net