ಶನಿವಾರಸಂತೆ: ಆಲೂರು ಸಿದ್ದಾಪುರ ಮಲ್ಲೇಶ್ವರ ರೋಟರಿ ಕ್ಲಬ್ ವತಿಯಿಂದ ಬದಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಾಟರ್ ಫಿಲ್ಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು.
ನಂತರ ರೋಟರಿ ಕ್ಲಬ್ ಅಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ, ರೋಟರಿ ಕ್ಲಬ್ ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಿದೆ. ಇದರ ಜತೆಗೆ ಸರ್ಕಾರಿ ಅಂಗನವಾಡಿ ಹಾಗೂ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಬೇರೆ ಬೇರೆ ರೀತಿಯಲ್ಲಿ ಸಹಕಾರ ನೀಡುತ್ತಿದೆ ಎಂದರು.
ರೋಟರಿ ಕ್ಲಬ್ ಕಾರ್ಯದರ್ಶಿ ಕಿರಣ್, ಪದಾಧಿಕರಿಗಳಾದ ಸಂಪತ್‌ಕುಮಾರ್, ತಮ್ಮಯ್ಯ, ವೆಂಕಟೇಶ್, ಜಿತೇಂದ್ರ, ಸತೀಶ್ ಶಾಲಾ ಮುಖ್ಯಶಿಕ್ಷಕ ರಾಜಕುಮಾರ್, ಶಿಕ್ಷಕ ವೃಂದದವರು, ಎಸ್‌ಡಿಎಂಸಿ ಸದಸ್ಯರು, ಪಾಲಕ ವೃಂದದವರು ಹಾಗೂ ಶಾಲಾ ಮಕ್ಕಳು ಹಾಜರಿದ್ದರು.
ಶನಿವಾರಸಂತೆ ಸಮೀಪದ ಬದಬನಹಳ್ಳಿ ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆಯಾಗಿ ನೀಡಲಾಯಿತು. ನಾರಾಯಣಸ್ವಾಮಿ, ಕಿರಣ್, ಸಂಪತ್‌ಕುಮಾರ್, ತಮ್ಮಯ್ಯ, ವೆಂಕಟೇಶ್, ಜಿತೇಂದ್ರ, ಸತೀಶ್ ಇತರರು ಇದ್ದರು.