ಫೆ.5ರಿಂದ ಜಲಾಶಯದಿಂದ ತುಂಗಾಭದ್ರಾ ನದಿಗೆ ನೀರು

bhadra dam new
ಭದ್ರಾ ಜಲಾಶಯ
Published on

ಶಿವಮೊಗ್ಗ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿಯ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ಫೆ.5ರಿಂದ 11ರವರೆಗೆ 5,800 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ.

ಪ್ರಾದೇಶಿಕ ಆಯುಕ್ತರ ಆದೇಶದನ್ವಯ 5ರ ರಾತ್ರಿ 100 ಕ್ಯೂಸೆಕ್, 6ರಿಂದ 11ರವರೆಗೆ ಪ್ರತಿದಿನ 800 ಕ್ಯೂಸೆಕ್‌ನಂತೆ 5,800 ಕ್ಯೂಸೆಕ್ ಪ್ರಮಾಣದ ನೀರನ್ನು ಭದ್ರಾ ನದಿಗೆ ಹರಿಸಲಾಗುವುದು. ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಕೆಲಸ ಮಾಡುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‌ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ನೀರಾವರಿ ನಿಗಮದ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಆರ್ ರವಿಚಂದ್ರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net