ವಯನಾಡು: ಕೇರಳದ ವಯನಾಡಿನಲ್ಲಿ ಭಾರಿ ಮಳೆಗೆ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದ್ದು, ಸದ್ಯದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ ಇದೀಗ 73ಕ್ಕೆ ಏರಿಕೆಯಾಗಿದೆ. ಮೃತರ ದೇಹಗಳು ಮೆಪ್ಪಾಡಿ ಆಸ್ಪತ್ರೆಯಲ್ಲಿದ್ದು, ಗುರುತು ಪತ್ತೆಹಚ್ಚುವಿಕೆಗೆ ಹರಸಾಹಸ ಪಡುವಂತಾಗಿದೆ. 100ಕ್ಕೂ ಅಧಿಕ ಮಂದಿ ಮಣ್ಣಿನಡಿ ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣ ತಂಡ ಸೇರಿದಂತೆ ಎಲ್ಲ ರಕ್ಷಣಾ ಏಜೆನ್ಸಿಗಳು ಸ್ಥಳದಲ್ಲಿ ಬೀಡುಬಿಟ್ಟು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ.
ಇದನ್ನೂ ಓದಿ: ಡಾ. ಕೋರೆ ಜನ್ಮದಿನ, 100 ರೋಗಿಗಳಿಗೆ ಎಂಜಿಯೋಗ್ರಾಫಿ ಉಚಿತ
ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ಮತ್ತಷ್ಟು ಚುರುಕಾಗಿ ಸಾಗುತ್ತಿದೆ. ಇನ್ನೂ ಹಲವರು ಮಣ್ಣಿನಡಿ ಸಿಲುಕಿರುವ ಶಂಕೆಯಿದೆ. ವೈದ್ಯಕೀಯ ಅಧಿಕಾರಿ, ಇಬ್ಬರು ಜೆಸಿಒಗಳು ಮತ್ತು 40 ಸೈನಿಕರೊಂದಿಗೆ ಸೆಕೆಂಡ್-ಇನ್-ಕಮಾಂಡ್ ಅಡಿಯಲ್ಲಿ ತಂಡವು ರಕ್ಷಣಾ ಕಾರ್ಯದಲ್ಲಿ ತೊಡಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ,(ಏಜೆನ್ಸೀಸ್).