ಜೀವ ರಕ್ಷಣೆಗಾಗಿ ಹೆಲ್ಮೆಟ್ ಧರಿಸಿ

sgr helmet
ಸಾಗರದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವಂತೆ ಸಾಗರ ಠಾಣೆ ಸಿಪಿಐ ಪುಲ್ಲಯ್ಯ ರಾಥೋಡ್ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದರು.
Published on

ಸಾಗರ: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸುವುದರಿಂದ ಅಪಘಾತದ ಸಂದರ್ಭ ಜೀವ ರಕ್ಷಣೆ ಸಾಧ್ಯವಾಗುತ್ತದೆ ಎಂದು ಸಾಗರ ಪಟ್ಟಣ ಠಾಣೆ ಸಿಪಿಐ ಪುಲ್ಲಯ್ಯ ರಾಥೋಡ್ ಹೇಳಿದರು.

ಸಾಗರದದಲ್ಲಿ ಶುಕ್ರವಾರ ಪೊಲೀಸ್ ಇಲಾಖೆಯಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವಂತೆ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿ ಮಾತನಾಡಿದರು.

ಪೊಲೀಸ್ ಇಲಾಖೆಯಿಂದ ಹೆಲ್ಮೆಟ್ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಇರುವುದರಿಂದ ಅವಘಡವಾದಾಗ ಸಾವು ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ನಿಮ್ಮನ್ನು ನಂಬಿ ನಿಮ್ಮ ಕುಟುಂಬ ಇರುತ್ತದೆ. ಅಪಘಾತವಾದರೆ ಮೊದಲು ತಲೆಗೆ ಏಟು ಬೀಳುತ್ತದೆ. ತಲೆಯನ್ನು ರಕ್ಷಣೆ ಮಾಡಿಕೊಳ್ಳಲು ಗುಣಮಟ್ಟದ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದರು.

ಸಾಗರ ನಗರದ ಪ್ರಮುಖ ವೃತ್ತಗಳಲ್ಲಿ ಇಂದಿನಿಂದ ಹೆಲ್ಮೆಟ್ ಧರಿಸುವಂತೆ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ. ಹೆಲ್ಮೆಟ್ ಧರಿಸದೆ ಬಂದರೆ ಅವರಿಗೆ ನಿಯಮಾವಳಿ ಪ್ರಕಾರ ದಂಡ ವಿಧಿಸಲಾಗುತ್ತಿದೆ. ವಾಹನ ಸವಾರರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net