ಸುರಕ್ಷತಾ ಸಾಧನ ಧರಿಸಿ ಸ್ವಚ್ಛತಾ ಕಾರ್ಯ ಕೈಗೊಳ್ಳಿ

16 HANUR 2
ಸೇವೆಯಿಂದ ನಿವೃತ್ತಿ ಹೊಂದಿದ ಹನೂರು ಪಟ್ಟಣ ಪಂಚಾಯಿತಿ ನೌಕರರಾದ ನಿಂಗರಾಜು, ರಾಜಣ್ಣ ಅವರನ್ನು ಸನ್ಮಾನಿಸಲಾಯಿತು. ಮುಮ್ತಾಜ್ ಬಾನು, ಆನಂದ್, ಮಹೇಶ್‌ಕುಮಾರ್ ಇತರರು ಇದ್ದರು.
Published on

ಹನೂರು: ಪ್ರತಿಯೊಬ್ಬರೂ ನಿತ್ಯ ಕಡ್ಡಾಯವಾಗಿ ಸುರಕ್ಷತಾ ಸಾಧನ ಧರಿಸಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹಾಜರಾತಿ ನೀಡುವುದಿಲ್ಲ ಎಂದು ಮುಖ್ಯಾಧಿಕಾರಿ ಎಂ.ಪಿ.ಮಹೇಶ್‌ಕುಮಾರ್ ಎಚ್ಚರಿಸಿದರು.

ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಪೌರ ಕಾರ್ಮಿಕರಿಗೆ ಸುರಕ್ಷತಾ ಸಾಧನಗಳನ್ನು ವಿತರಿಸಿ ಮಾತನಾಡಿದ ಅವರು, ಪಟ್ಟಣದ ಸ್ವಚ್ಛತೆಗೆ ಪೌರ ಕಾರ್ಮಿಕರ ಶ್ರಮ ಅಪಾರ. ಹಾಗಾಗಿ ಇವರ ರಕ್ಷಣೆ ಹಾಗೂ ಆರೋಗ್ಯದ ದೃಷ್ಟಿಯಿಂದ ಸುರಕ್ಷತಾ ಸಾಧಗಳನ್ನು ವಿತರಿಸಲಾಗುತ್ತಿದೆ. ಆದರೆ ಬಹುತೇಕ ಕಾರ್ಮಿಕರು ಸ್ವಚ್ಛತಾ ವೇಳೆ ಸಾಧನಗಳನ್ನು ಬಳಕೆ ಮಾಡುತ್ತಿಲ್ಲ. ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಆದ್ದರಿಂದ ನೀಡಿರುವ ಪರಿಕರಗಳನ್ನು ಕಡ್ಡಾಯವಾಗಿ ಧರಿಸಬೇಕು. ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ತಿಳಿಸಿದರು.

ನಿವೃತ್ತ ನೌಕರರಿಗೆ ಸನ್ಮಾನ: ಇದಕ್ಕೂ ಮುನ್ನ ಪಪಂನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೌಕರರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನಿಂಗರಾಜು ಹಾಗೂ ರಾಜಣ್ಣ ಅವರನ್ನು ಪಪಂ ವತಿಯಿಂದ ಸನ್ಮಾನಿಸಲಾಯಿತು.

ನಿವೃತ್ತಿಯಾದ ನೌಕರರು ಕಷ್ಟದಲ್ಲಿದ್ದಾರೆ. ಆದ್ದರಿಂದ ಇವರಿಗೆ ಸಿಗಬೇಕಾದ ಬಾಕಿ ವೇತನ ಮಂಜೂರು ಮಾಡಬೇಕು. ಜತೆಗೆ ಕಾರ್ಯನಿರ್ವಹಿಸುತ್ತಿದ್ದ ಕೆಲಸದಲ್ಲಿಯೇ ಇವರ ಕುಟುಂಬಸ್ಥರೊಬ್ಬರಿಗೆ ಉದ್ಯೋಗ ನೀಡಬೇಕು ಎಂದು ಸದಸ್ಯರು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ ಮಹೇಶ್‌ಕುಮಾರ್, ಮೂರು ದಿನಗಳೊಳಗಾಗಿ ವೇತನವನ್ನು ಮಂಜೂರು ಮಾಡಲಾಗುವುದು. ಜತೆಗೆ ಹೊಸದಾಗಿ ಟೆಂಡರ್ ಕರೆದು ಕುಟುಂಬಸ್ಥರೊಬ್ಬರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದರು.

ಪಪಂ ಅಧ್ಯಕ್ಷೆ ಮುಮ್ತಾಜ್‌ಬಾನು, ಉಪಾಧ್ಯಕ್ಷ ಆನಂದ್, ಸದಸ್ಯರಾದ ಸೋಮಶೇಖರ್, ಸುದೇಶ್, ಮಹೇಶ್, ಸಂಪತ್‌ಕುಮಾರ್, ಮಹೇಶ್‌ನಾಯ್ಕ, ಪವಿತ್ರಾ, ಮಂಜುಳಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net