ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಹೈ ಅಲರ್ಟ್​​..!

rf
Published on

ನವೆಂಬರ್ 12ರವರೆಗೂ ಅತಿಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 15 ಜಿಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮೂರು ದಿನಗಳವರೆಗೆ ಈ ಜಿಲ್ಲೆಗಳಲ್ಲಿ ನಿರಂತರ ವರ್ಷಧಾರೆಯಾಗಲಿದ್ದು, ಬಿರುಗಾಳಿಯ ಎಚ್ಚರಿಕೆ ಕೂಡಾ ನೀಡಲಾಗಿದೆ.


ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಮಳೆ‌ ಮುನ್ಸೂಚನೆ ನೀಡಲಾಗಿದೆ.


ಇಂದಿನಿಂದ ಮೂರು ದಿನಗಳವ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಗಂಟೆಗೆ 30ರಿಂದ 40 ಕಿ.ಮೀ ವೇಗದ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಮಿಂಚು ಮತ್ತು ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಎನ್ನಲಾಗಿದೆ.


ರಾಜ್ಯಗಳಲ್ಲಿ ವಾಯು ಮಾಲಿನ್ಯದ ಪರಿಣಾಮ ಉಸಿರು ಬಿಗಿ ಹಿಡಿಯುವ ವಾತಾವರಣ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ಮಳೆಯಾದರೆ ಒಂದಷ್ಟು ಮಾಲಿನ್ಯ ದೂರವಾಗುತ್ತದೆ. ನೈಸರ್ಗಿಕ ಮಳೆಗೆ ಮುನ್ನವೇ ದೆಹಲಿ-ಎನ್‌ಸಿಆರ್‌ನಲ್ಲಿ ಕೃತಕ ಮಳೆಯ ಕುರಿತು ಚರ್ಚೆ ನಡೆದಿದೆ.


ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಮತ್ತು ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕೋಲಾರದಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ​

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net