

Weather Forecast: ಕಳೆದ ಕೆಲವು ದಿನಗಳಿಂದ ಕೇರಳದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಗಡಿಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವು ಪ್ರದೇಶಗಳಲ್ಲಿ ಮನೆಗಳು ಜಲಾವೃತಗೊಂಡಿದ್ದು, ಮೀನುಗಾರರು ನಾಪತ್ತೆಯಾಗಿದ್ದಾರೆ. ಈ ಮಧ್ಯೆ ಇಂದೂ ರಾಜ್ಯದ 4 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಐಎಂಡಿ ತಿಳಿಸಿದೆ.
ಕಾಸರಗೋಡು, ಕಣ್ಣೂರು, ಎರ್ನಾಕುಲಂ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 7 ಸೆಂ.ಮೀನಿಂದ 11 ಸೆಂ.ಮೀ ವರೆಗೆ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಜೂನ್ 2: ಕಣ್ಣೂರು, ಕಾಸರಗೋಡು, ಎರ್ನಾಕುಲಂ ಮತ್ತು ಆಲಪ್ಪುಳ
ಜೂನ್ 3: ಕೋಜಿಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಅಲರ್ಟ್
ಹವಾಮಾನ ಪ್ರಕಟಣೆ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಕಾಸರಗೋಡು ಜಿಲ್ಲೆಯ ಮುಳಿಯಾರ್ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಈ ಮಧ್ಯೆ, ಕಾಸರಗೋಡಿನ ಕೂಡ್ಲು ಮತ್ತು ಪಣತ್ತೂರಿನಲ್ಲಿ ಕ್ರಮವಾಗಿ 14 ಸೆಂ.ಮೀ ಮತ್ತು 12 ಸೆಂ.ಮೀ ಮಳೆ ದಾಖಲಾಗಿದೆ. ಇನ್ನು ಭಾನುವಾರ ಕೇರಳ ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ,(ಏಜೆನ್ಸೀಸ್).