ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರಿಕೆ; ಹಲವೆಡೆ ಯೆಲ್ಲೋ ಅಲರ್ಟ್​ ಘೋಷಣೆ

1176135
Published on

ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆ ಇನ್ನೂ ನಾಲ್ಕು ದಿನಗಳ ಕಾಲ ಮುಂದುವರಿಯಲಿದ್ದು, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಸದಾನಂದ ಅಡಿಗ ತಿಳಿಸಿದ್ದಾರೆ.

ರಾಜ್ಯದ ಯಾವ ಭಾಗದಲ್ಲಿ, ಯಾವ ದಿನ ಯಾವ ಪ್ರಮಾಣದ ಮಳೆ ಸುರಿಯಲಿದೆ ಎಂಬ ಮಾಹಿತಿ, ಮಾತ್ರವಲ್ಲದೆ ಯಾವ ಪ್ರದೇಶದಲ್ಲಿ ಯಾವ ಅಲರ್ಟ್ ಘೋಷಿಸಲಾಗಿದೆ ಎಂಬುದನ್ನೂ ಅವರು ತಿಳಿಸಿದ್ದಾರೆ. ಸಾರ್ವಜನಿಕರು ಆ ಪ್ರಕಾರ ಮುನ್ನೆಚ್ಚರಿಕೆ ವಹಿಸಬಹುದು.

ಅ. 11, 12, 13ರಂದು ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅ. 11ರಂದು ಮೈಸೂರು, ಮಂಡ್ಯ ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಒಂದೆರಡು ಕಡೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅ. 12ರಂದು ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಅ.13ರಂದು ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆ ಆಗಲಿದೆ. ಅ. 12ರಂದು ಬೆಳಗಾವಿ, ಧಾರವಾಡ, ಕೊಪ್ಪಳ, ಬಾಗಲಕೋಟೆ, ಗದಗ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅ. 13ರಂದು ಧಾರಾವಾಡ, ಗದಗ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆ ನಿರೀಕ್ಷೆ ಇದೆ ಎಂದಿರುವ ಅವರು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೂ ದಿನವೂ ಯೆಲ್ಲೋ ಅಲರ್ಟ್ ಇರಲಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net