ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆ; ಕರ್ನಾಟಕ Weather Forecast ಪೂರ್ತಿ ವಿವರ ಇಲ್ಲಿದೆ

heavy rains
Published on

ಬೆಂಗಳೂರು: ಕೆಲ ದಿನಗಳ ಕಾಲ ರಾಜ್ಯದಲ್ಲಿ ಬಿಡುವು ಪಡೆದಿದ್ದ ಮೆಳೆ ಇದೀಗ ಮತ್ತೊಮ್ಮೆ ಆರ್ಭಟಿಸಲು ಶುರು ಮಾಡಿದ್ದು, ಇಂದು (ನವೆಂಬರ್​ 17) ಕೂಡ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ (Heavy Rains) ಎಂದು ಹವಮಾನಾ ಇಲಾಖೆ ಮುನ್ಸೂಚನೆ (Weather Forecast) ನೀಡಿದೆ.

ಅದರಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದ್ದು, ಬೆಂಗಳೂರಿನ ಕೆಲವೆಡೆ ಶನಿವಾರ ಮಳೆಯಾಗಿದೆ, ಭಾನುವಾರವೂ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ.

ಕಳೆದ ಕೆಲ ವಾರಗಳ ಹಿಂದೆ ಬಿಡುವು ಪಡೆದಿದ್ದ ಮಳೆ ಮತ್ತೊಮ್ಮೆ ಗುಡುಗು, ಸಿಡಿಲನೊಂದಿಗೆ ಅಬ್ಬರಿಸುತ್ತಿದ್ದು, ಈ ತಿಂಗಳಾಂತ್ಯದವರೆಗೂ ಸುರಿಯುವ ನಿರೀಕ್ಷೆ ಇದೆ. ಹವಾಮಾನ ಇಲಾಖೆ (Weather Forecast) ಈ ಬಗ್ಗೆ ವರದಿ ಮಾಡಲಿದ್ದು, ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net