ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರಿಕೆ

rain
Published on

ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು. ರಾಮನಗರ, ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಎರಡು ದಿನ ವರುಣನ ಆರ್ಭಟ ಜೋರಾಗಿರಲಿದೆ.

ಹವಾಮಾನ ಇಲಾಖೆ ಮುನ್ಸೂಚನೆ

ವಿಜಯಪುರ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ರಾಮನಗರ, ಚಾಮರಾಜನಗರ ರಾಯಚೂರು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು, ಕೋಲಾರ. ತುಮಕೂರು, ಕಲಬುರಗಿ ಸೇರಿದಂತೆ ಉತ್ತರ ಕನ್ನಡದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ನೆನ್ನೆ ಶಿವಮೊಗ್ಗದ ಹುಂಚಕಟ್ಟೆಯಲ್ಲಿ ಅತಿಹೆಚ್ಚು ಮಳೆಯಾಗಿದ್ದು 6 ಸೆ.ಮೀ ಮಳೆ ದಾಖಲಾಗಿದೆ. ಚಿಕ್ಕಮಗಳೂರಿನ ಕಮ್ಮರಡಿ ಹಾಗೂ ಜಯಪುರದಲ್ಲಿ ತಲಾ 5 ಸೆಂ.ಮೀ, ಹಾಸನದ ಶ್ರವಣಬೆಳಗೋಳದಲ್ಲಿ ಧರ್ಮಸ್ಥಳ, ಅರಕಲಗೊಡು, ಬೆಂಗಳೂರು ನಗರದಲ್ಲಿ ತಲಾ 3 ಸೆಂ.ಮೀ ಮಳೆ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net