ಗುಡುಗು, ಬಲವಾದ ಗಾಳಿ ಸಹಿತ ಜಲಪ್ರಳಯದ ಮುನ್ಸೂಚನೆ, ಇಂದು ಈ ಭಾಗಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಣೆ

rainnn
Published on

Weather Forecast Today: ದೇಶದ ಕೆಲವು ರಾಜ್ಯಗಳಲ್ಲಿ ಮಳೆಯಿಂದಾಗಿ ಹವಾಮಾನದ ಸ್ವರೂಪ ಬದಲಾಗಿದೆ. ಕಳೆದ ಕೆಲವು ದಿನಗಳಿಂದ ಉತ್ತರ ಪ್ರದೇಶದ ಕೆಲವು ನಗರಗಳಲ್ಲಿ ಮಳೆಯಿಂದ ಭಾರೀ ಅನಾಹುತ ಸೃಷ್ಟಿಯಾಗಿದೆ.


ಬಹಳ ದಿನಗಳ ಬಳಿಕ ಮುಂಗಾರು ಮತ್ತೆ ಚುರುಕಾಗಿದೆ. ಪ್ರಸ್ತುತ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಸಕ್ರಿಯವಾಗಿದ್ದು, ಇದರಿಂದಾಗಿ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.


ಇಂದು ಕೂಡ ಹವಾಮಾನ ಇಲಾಖೆ ಹಲವೆಡೆ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ಶ್ಚಿಮ ಬಂಗಾಳ, ಒಡಿಶಾ, ಬಿಹಾರ ಮತ್ತು ಈಶಾನ್ಯ ಭಾರತದ ಹಲವು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ಅಷ್ಟೇ ಅಲ್ಲದೆ, ಅನೇಕ ಭಾಗಗಳಲ್ಲಿ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.


ಜಾರ್ಖಂಡ್, ಕೇರಳ, ಕರಾವಳಿ ಕರ್ನಾಟಕ, ಒಳನಾಡು ಕರ್ನಾಟಕ, ತೆಲಂಗಾಣ, ಕೊಂಕಣ, ಗೋವಾ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.


ಕರ್ನಾಟಕ ಹವಾಮಾನ ಪರಿಸ್ಥಿತಿ ಹೀಗಿದೆ
ರಾಜ್ಯದ ಕರಾವಳಿ ಭಾಗ ಸೇರಿದಂತೆ ಅನೇಕ ಭಾಗಗಳಲ್ಲಿ ಮುಂಗಾರು ಪ್ರಾರಂಭವಾಗಿದೆ. ಕೆಲವೆಡೆ ಧಾರಾಕಾರ ಮಳೆಯಾಗಿದ್ದರೆ, ಇನ್ನೂ ಕೆಲವೆಡೆ ಮಳೆ ಸಿಂಚನವಾಗಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳವರೆಗೆ ಭಾರೀಯಿಂದ ಸಾಧಾರಾಣ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಕುಮಟಾ, ಅಂಕೋಲಾ, ಶಿರಸಿ ತಾಲೂಕಿನ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net