ಮುಂದಿನ 3 ದಿನ ಈ ಭಾಗಗಳಲ್ಲಿ ಜಲಪ್ರಳಯದ ಭೀತಿ..! ಮಳೆ ಜತೆ ಗುಡುಗು, ಮಿಂಚು, ಬಿರುಗಾಳಿಯ ಮುನ್ನೆಚ್ಚರಿಕೆ

raaaaiiii
Published on

weather update: 12-10-2023: ಮುಂದಿನ 2-3 ದಿನಗಳ ಕಾಲ ಉತ್ತರ ಭಾರತದ ಕೆಲ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಗಂಗಾನದಿ ಪಶ್ಚಿಮ ಬಂಗಾಳದ ಕೆಲವು ಭಾಗಗಳು, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ ಮತ್ತು ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.


ತೆಲ;ಂಗಾಣ, ಕರ್ನಾಟಕ ಮತ್ತು ಮಹಾರಾಷ್ಟ್ರ ಮತ್ತು ಮಧ್ಯ ಅರೆಬಿಯನ್​​ ಸಮುದ್ರದ ಕೆಲ ಭಾಗಗಳಲ್ಲಿ ತೀವ್ರವಾಗಿ ಮಳೆ ಸುರಿಯಲಿದೆ.
ಇಂದು ತಮಿಳುನಾಡು, ದಕ್ಷಿಣ ಒಳನಾಡು ಕರ್ನಾಟಕ ಮತ್ತು ಕೇರಳದಲ್ಲಿ ಗುಡುಗು ಮತ್ತು ಮಿಂಚಿನ ಜೊತೆಗೆ ಪ್ರತ್ಯೇಕವಾದ ಭಾರೀ ಮಳೆಯಾಗಲಿದೆ.


ಅಕ್ಟೋಬರ್ 13-15 ರವರೆಗೆ ಶೀತ ವಾತವರಣವೇ ಮುಂದುವರೆಯಲಿದ್ದು, ಕಾಶ್ಮೀರ-ಗಿಲ್ಗಿಟ್-ಬಾಲ್ಟಿಸ್ತಾನ್ ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಮತ್ತು ಮಿಂಚಿನ ಜೊತೆಗೆ ಹಿಮ ಅಥವಾ ಮಧ್ಯಮ ಮಳೆ ಬೀಳಲಿದೆ.
ಕರಾವಳಿ ಕರ್ನಾಟಕ ಮತ್ತು ಕೇರಳದ ಮಾಹೆಯ ಮೇಲೆ ಪರಿಣಾಮ ಬೀರಲಿದ್ದು, ಜನರು ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ.

ತಮಿಳುನಾಡು, ಪುದುಚೇರಿ, ಕಾರೈಕಲ್, ಕರ್ನಾಟಕದ ದಕ್ಷಿಣ ಒಳಭಾಗ ಮತ್ತು ಕೇರಳ-ಮಾಹೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net