ಸುತ್ತೂರು ಜಾತ್ರಾ ಮಹೋತ್ಸವ ಪ್ರಚಾರ ರಥಕ್ಕೆ ಸ್ವಾಗತ

ಸುತ್ತೂರು ಜಾತ್ರಾ ಮಹೋತ್ಸವ ಪ್ರಚಾರ ರಥಕ್ಕೆ ಸ್ವಾಗತ
Published on

ಹನೂರು: ಸುತ್ತೂರು ಜಾತ್ರಾ ಮಹೋತ್ಸವ ಪ್ರಚಾರದ ನಿಮಿತ್ತ ಬುಧವಾರ ತಾಲೂಕಿನ ಮಲೆಮಹದೇಶ್ವರ ಬೆಟ್ಟದಿಂದ ಹನೂರಿಗೆ ಆಗಮಿಸಿದ ರಥಯಾತ್ರೆಯನ್ನು ಶಾಸಕ ಎಂ.ಆರ್. ಮಂಜುನಾಥ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ಎಸ್. ದತ್ತೇಶ್‌ಕುಮಾರ್ ಹಾಗೂ ಭಕ್ತರು ಶ್ರೀ ಶಿವರಾತ್ರೀಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಬರಮಾಡಿಕೊಂಡರು.

ಶಾಸಕ ಎಂ.ಆರ್. ಮಂಜುನಾಥ್ ಮಾತನಾಡಿ, ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ಫೆ.6 ರಿಂದ 11 ರವರೆಗೆ ಸುತ್ತೂರಿನಲ್ಲಿ ನಡೆಯಲಿದೆ. ಹನೂರು ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವಂತೆ ಮನವಿ ಮಾಡಿದರು.

ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ತಾಲೂಕಿನ ಬಂಡಳ್ಳಿ ಗ್ರಾಮದ ವಿದ್ಯಾರ್ಥಿನಿ ಹೊನ್ನಮ್ಮಳನ್ನು ಇದೇ ವೇಳೆ ಸನ್ಮಾನಿಸಲಾಯಿತು. ಮುಖಂಡರಾದ ಕಣ್ಣೂರು ಬಸವರಾಜಪ್ಪ, ಅಜ್ಜಿಪುರ ಮುರುಡೇಶ್ವರ ಸ್ವಾಮಿ, ಜಿ.ಕೆ. ಹೊಸೂರಿನ ಬಸವರಾಜು, ಆನಾಪುರದ ಉಮೇಶ್, ವೆಂಕಟೇಗೌಡ, ಮಹದೇವಪ್ರಸಾದ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net