

ಬೆಟ್ಟದಪುರ: ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರಕ್ಕೆ ಇತ್ತೀಚೆಗೆ ಆಗಮಿಸಿದ್ದ ಪ್ರಚಾರ ರಥವನ್ನು ಸ್ವಾಗತಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಕನ್ನಡ ಮಠದ ಶ್ರೀ ಚನ್ನಬಸವ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಜಾನಪದ ಉತ್ಸವ, ರೈತ ಗೋಷ್ಠಿ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ನಾಡಿನ ಪರಂಪರೆಯನ್ನು ಬಿಂಬಿಸುವ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಬೇಕು ಎಂದು ಹೇಳಿದರು.
ತಣ್ಣೀರುಹಳ್ಳ ಮಠದ ಶ್ರೀ ವಿಜಯಕುಮಾರ ಸ್ವಾಮೀಜಿ ಮಾತನಾಡಿ, ನಾಡಿನಾದ್ಯಂತ ಮಹಿಳೆಯರು, ರೈತರು, ಸಾಹಿತಿಗಳ ಸಮಾಗಮವೇ ಸುತ್ತೂರು ಜಾತ್ರೆಯಾಗಿದೆ. ಕನ್ನಡ ನಾಡಿನ ವೈಭವವಾಗಿದ್ದು, ಪ್ರತಿಯೊಬ್ಬರೂ ಭಾಗವಹಿಸಬೇಕು ಎಂದರು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಬಳಿಕ ಸಮೀಪದ ಆವರ್ತಿ ಹಾಗೂ ಕೊಪ್ಪ ಗ್ರಾಮಗಳಿಗೆ ಬೀಳ್ಕೊಡಲಾಯಿತು. ಹಾಸನ ಜಿಲ್ಲಾ ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಎನ್.ಕುಮಾರಸ್ವಾಮಿ, ಸಮಾಜ ಸೇವಕ ಕೂರ್ಗಲ್ ಶಿವಕುಮಾರ್, ಬೆಟ್ಟದಪುರ ವೀರಶೈವ ಸಮಾಜದ ಅಧ್ಯಕ್ಷ ಶಿವದೇವ್, ಯುವ ಘಟಕದ ಅಧ್ಯಕ್ಷ ಮಂಜು, ಮುಖಂಡರಾದ ಬಿ.ಸಿ.ರಾಜೇಂದ್ರ, ಬಿ.ಎಸ್.ಬಸವರಾಜ್, ಬಿ.ಸಿ.ಮಹದೇವಪ್ಪ , ಶಿವಶಂಕರ್, ಎಸ್.ಮಲ್ಲೇಶ್, ಮೈಲಾರಿ, ರಾಣಿ ಇತರರಿದ್ದರು.