ಅವರವರ ಜಿಲ್ಲೆಗಳಿಗೆ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ: ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

mamata banerjee
Published on

ಕೋಲ್ಕತ್ತ: ರಾಜ್ಯದ ಎಲ್ಲ ಶಿಕ್ಷಕರನ್ನು ಅವರವರ ಜಿಲ್ಲೆಗಳಿಗೆ ವರ್ಗಾಯಿಸಲು ನಿರ್ಧರಿಸಲಾಗಿದೆ ಎಂದು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಸಮಾಜ ಮತ್ತು ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಹಿರಿದು. ಹಾಗಾಗಿ ಅವರ ಕೊಡುಗೆಗೆ ಕೃತಜ್ಞತೆ ವ್ಯಕ್ತಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸರಸ್ವತಿ ಪೂಜೆ ಹಿನ್ನೆಲೆಯಲ್ಲಿ ಈ ಐತಿಹಾಸಿಕ ನಿರ್ಣಯ ಮಾಡಲಾಗಿದೆ. ಇದರಿಂದ ಶಿಕ್ಷಕರು ತಮ್ಮ ಕುಟುಂಬವನ್ನು ನೋಡಿಕೊಳ್ಳಬಹುದು. ಮತ್ತು ಶಾಂತ ಚಿತ್ತದಿಂದ ಕಾರ್ಯ ನಿರ್ವಹಿಸಬಹುದು. ಎಲ್ಲ ಶಿಕ್ಷಕರಿಗೂ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಡಿಸೆಂಬರ್​ 2018ರಲ್ಲಿ ಸರ್ಕಾರವು ಶಿಕ್ಷಕರ ವರ್ಗಾವಣೆಯನ್ನು ರದ್ದುಗೊಳಿಸಿ ಆದೇಶಿಸಿತ್ತು. ಈ ಆದೇಶವು ಸರ್ಕಾರಿ ಮತ್ತು ಸರ್ಕಾರ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ಅನ್ವಯವಾಗಿತ್ತು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net