ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ; ಏಳು ಮಂದಿ ಮೃತ್ಯು!

Untitled design (85)
Published on

ಪಶ್ಚಿಮ ಬಂಗಾಳ: ಭಾನುವಾರ (ಆಗಸ್ಟ್​ 27) ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಕಾರಣ ಘಟನೆಯಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಪಶ್ಚಿಮ ಬಂಗಾಳದ ಜಗನ್ನಾಥಪುರದಲ್ಲಿ ವರದಿಯಾಗಿದೆ.

ಕೋಲ್ಕತ್ತಾದ ಉತ್ತರಕ್ಕೆ 30 ಕಿ.ಮೀ ದೂರದಲ್ಲಿರುವ ದತ್ತಪುಕೂರ್ ಪೊಲೀಸ್ ಠಾಣೆ ವ್ಯಾಪ್ತಿಯ ನೀಲ್‌ಗುಂಜ್‌ನ ಮೋಶ್‌ಪೋಲ್‌ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಹಲವಾರು ಜನರು ಕೆಲಸದಲ್ಲಿ ನಿರತರಾಗಿದ್ದ ವೇಳೆ ಸ್ಫೋಟ ಸಂಭವಿಸಿದೆ.

ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಶೋಧ ಮತ್ತು ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net