ಪಶ್ಚಿಮ ಬಂಗಾಳದಲ್ಲಿ ರೈಲು ದುರಂತ; ಸಾವಿನ ಸಂಖ್ಯೆ 15ಕ್ಕೆ ಏರಿಕೆ..ಹಲವರಿಗೆ ಗಾಯ

Untitled-design-2024-06-17T123253.712-1
Published on

ಕೋಲ್ಕತ: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿಯಲ್ಲಿ ಗೂಡ್ಸ್ ರೈಲು ಮತ್ತು ಸೀಲ್ದಾಹ್ ಕಡೆಗೆ ಹೊರಟಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್ ನಡುವೆ ಸಂಭವಿಸಿದ ಅಪಘಾತದಲ್ಲಿನ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಹಲವರಿಗೆ ಗಾಯವಾಗಿದೆ.

ಕಾಂಚನಜುಂಗಾ ಎಕ್ಸ್‌ಪ್ರೆಸ್ ತ್ರಿಪುರಾದ ಅಗರ್ತಲಾದಿಂದ ಕೋಲ್ಕತ್ತಾದ ಸೀಲ್ದಾಹ್ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತ ಎಷ್ಟು ತೀವ್ರವಾಗಿದೆ ಎಂದರೆ ಗೂಡ್ಸ್ ರೈಲಿನ ಇಂಜಿನ್ ಡಿಕ್ಕಿ ಹೊಡೆದ ರಭಸಕ್ಕೆ ಕಾಂಜನಜುಂಗಾ ಎಕ್ಸ್‌ಪ್ರೆಸ್‌ನ ಮೂರು ಬೋಗಿಗಳು ಜಖಂಗೊಂಡಿವೆ. ಬೋಗಿಗಳು ಒಂದರ ಮೇಲೊಂದು ಏರಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಎನ್‌ಡಿಆರ್‌ಎಫ್, ವಿಭಾಗೀಯ ತಂಡ ಮತ್ತು 15 ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ತಲುಪಿವೆ. ಸದ್ಯ ಪ್ರಾಥಮಿಕ ಮಾಹಿತಿ ಪ್ರಕಾರ ಗೂಡ್ಸ್ ರೈಲಿನ ಚಾಲಕನ ನಿರ್ಲಕ್ಷ್ಯದಿಂದ ಪ್ರಕರಣ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲಾಗಿದೆ ಎನ್ನಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತ ದುಃಖಕರವಾಗಿದೆ. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಹಾಗೂ ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಭಗವಂತನಲ್ಲಿ ಬೇಡುವೆ ಎಂದು ಹೇಳಿದರು.ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ. (ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net