ಲಾಕ್​ಡೌನ್ ವಿಸ್ತರಣೆ : ಸಿಎಂ ಯಡಿಯೂರಪ್ಪ ಹೇಳಿದ್ದೇನು ?

yediyurappa
yediyurappa
Published on

ಬೆಂಗಳೂರು: ರಾಜ್ಯದಲ್ಲಿ ಜೂನ್ 7 ರ ನಂತರ ಲಾಕ್ಡೌನ್ ವಿಸ್ತರಣೆ ಮಾಡುವ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ. ಲಾಕ್ಡೌನ್ ವಿಸ್ತರಿಸುವಂತೆ ತಜ್ಞರು ವರದಿ ನೀಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ ನಿವಾಸ ಕಾವೇರಿಯಲ್ಲಿ ಪೌರ ಕಾರ್ಮಿಕರಿಗೆ ಫುಡ್ ಕಿಟ್ ವಿತರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜೂನ್ 5 ಅಥವಾ 6 ರಂದು ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಜನ ಸಹಕರಿಸಿದರೆ ಲಾಕ್ಡೌನ್ ವಿಸ್ತರಿಸುವ ಅಗತ್ಯವಿಲ್ಲ.‌ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಿಲ್ಲ. ಈ ಬಗ್ಗೆ ತಜ್ಞರು, ಸಚಿವರ ಜತೆ‌ ಸಮಾಲೋಚನೆ ನಡೆಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net