ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಯಾವ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರೆ? ಇಂದಿರಾಗಾಂಧಿ ತಂದ ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟವೇ ಒಂದು ಸ್ವಾತಂತ್ರ್ಯ ಸಂಗ್ರಾಮ. ಆ ಸಂಗ್ರಾಮದಲ್ಲಿ ಜನಸಂಘದ ನಾಯಕರು ಭಾಗವಹಿಸಿದ್ದರು. ಕಾಂಗ್ರೆಸ್‌ನವರು ಯಾವ ಹೋರಾಟ ಮಾಡಿದ್ದಾರೆ ಎಂದು ತಿಳಿಸಲಿ. ಇಂದಿರಾಗಾಂಧಿಯನ್ನೇ ವಿರೋಧಿಸಿ ಹೋರಾಟ ಮಾಡಿದ ಆರ್‌ಎಸ್‌ಎಸ್, ರಾಹುಲ್ ಗಾಂಧಿಗೆ ಹೆದರುವುದಿಲ್ಲ ಎಂದರು.