

ಇಳಕಲ್ಲ (ಗ್ರಾ) : ಪ್ರತಿನಿತ್ಯ ಕೊಲೆ, ಸುಲಿಗೆ, ಭ್ರಷ್ಟಾಚಾರ ಮಾಡುತ್ತ ಬಂದಿರುವ ಕಾಂಗ್ರೆಸ್ ಸರ್ಕಾರ ಯಾವ ಸಾಧನೆ ಮಾಡಿದೆ ಎಂದು ಸಮಾವೇಶ ಮಾಡುತ್ತಿದೆ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಪ್ರಶ್ನಿಸಿದರು.
ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿಯವರ ಸರ್ಕಾರವನ್ನು 40 ಪರ್ಸೆಂಟ್ ಸರ್ಕಾರ ಎಂದು ಅಪಪ್ರಚಾರ ಮಾಡಿದ ಕಾಂಗ್ರೆಸ್ ಪಕ್ಷ ಈಗ ಏನು ಮಾಡುತ್ತಿದೆ? ಅದೇ ಗುತ್ತಿಗೆದಾರರು 60 ಪರ್ಸೆಂಟ್ ಸರ್ಕಾರ ಎಂದು ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಕೇವಲ ಗ್ಯಾರಂಟಿ ಹೆಸರಿನಲ್ಲಿ ರಾಜ್ಯವನ್ನು ಹಳ್ಳ ಹಿಡಿಸುವ ಕೆಲಸವನ್ನು ವ್ಯವಸ್ಥಿತವಾಗಿ ಮಾಡುತ್ತಿದೆ.
ಇನ್ನು ಕ್ಷೇತ್ರದ ವಿಷಯಕ್ಕೆ ಬಂದರೆ ಶಾಸಕ ವಿಜಯಾನಂದ ಕಾಶಪ್ಪನವರ ಭ್ರಷ್ಟಾಚಾರ ಮತ್ತು ಕಮಿಷನ್ ವ್ಯವಹಾರದಲ್ಲಿ ಮುಳುಗಿದ್ದಾರೆ. ನಾಚಿಕೆ, ಮಾನ-ಮರ್ಯಾದೆ ಎಲ್ಲವನ್ನೂ ಬಿಟ್ಟು ನಿಂತಿದ್ದಾರೆ ಎಂದು ಟೀಕಿಸಿದರು.
ಗ್ರಾಮೀಣ ಬಿಜೆಪಿ ಘಟಕ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ, ಮಹಾಂತಪ್ಪ ಚೆನ್ನಿ, ಸೂಗುರೇಶ ನಾಗಲೋಟಿ, ಲಕ್ಷ್ಮಣ ಗುರಂ , ಜಿ.ಎಚ್. ಗುಳೇದ ಇದ್ದರು.