

ಬೆಂಗಳೂರು: ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಭಾರತೀಯ ವಿವಾಹ ಕಾಯ್ದೆ 13(1)ಅಡಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜೂನ್ 6ರಂದು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ.
ಮೂಲತಃ ಮೈಸೂರಿನ ಹುಡುಗಿ ಶ್ರೀದೇವಿ ಭೆರಪ್ಪ. ಅಲ್ಲೇ ಹುಟ್ಟಿ ಅಲ್ಲೇ ಬೆಳೆದು ಉನ್ನತ ಶಿಕ್ಷಣ ಮುಗಿಸಿದರು. ಯುವ ಮತ್ತು ಶ್ರೀದೇವಿ ಪ್ರಾರಂಭದಲ್ಲಿ ಫ್ರೆಂಡ್ಸ್ ಆಗಿದ್ದರು. ಬಳಿಕ ಇವರ ಸ್ನೇಹ ಪ್ರೀತಿಗೆ ತಿರುಗಿದೆ. ಅಚ್ಚರಿಯ ಸಂಗತಿ ಎಂದರೆ 7 ವರ್ಷದಿಂದ ಈ ಜೋಡಿ ಪ್ರೀತಿಸಿ ಬಳಿಕ ವಿವಾಹವಾಗುತ್ತಾರೆ.
2019ರಲ್ಲಿ ಯುವ ರಾಜ್ಕುಮಾರ್ ಮತ್ತು ಶ್ರೀದೇವಿ ವಿವಾಹವಾಗುತ್ತಾರೆ. ಬಳಿಕ ರಾಜ್ ಫ್ಯಾಮಿಲಿ ಸೇರುತ್ತಾರೆ. ಅಂದಹಾಗೆಯೇ ಶ್ರೀದೇವಿ ‘ಡಾ.ರಾಜ್ ಕುಮಾರ್ ಸಿವಿಲ್ ಸರ್ವೀಸ್ ಅಕಾಡೆಮಿ’ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು. ಆದರೀಗ ಈ ಜೋಡಿ ನಡುವೆ ಮನಸ್ತಾಪವಿದೆ ಎಂದು ಹೇಳಲಾಗುತ್ತಿದೆ. ಕೆಲವು ದಿನಗಳಿಂದ ಇಬ್ಬರೂ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇನ್ನೂ ಯುವ ಸಿನಿಮಾ ಪ್ರಚಾರದಲ್ಲಿ ಪತ್ನಿ ಶ್ರೀದೇವಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.