ಡಿಸಿಎಂ ಶಿವಕುಮಾರರ ಚೆನ್ನೈ ಪ್ರವಾಸ ಯಾವ ಪುರುಷಾರ್ಥಕ್ಕೊ?: ಆರ್​.ಅಶೋಕ ವ್ಯಂಗ್ಯ | Chennai

dk - 2025-03-22T184151.080
Published on

Chennai: ರಾಜ್ಯದಲ್ಲಿ ಇಡೀ ಸರ್ಕಾರವೇ ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿರುವಾಗ ಪಾರ್ಟ್ ಟೈಂ ಡಿಸಿಎಂ ಡಿ.ಕೆ.ಶಿವಕುಮಾರ್ ತಮಗೆ ಸಂಬಂಧವೇ ಇಲ್ಲದಂತೆ ಚೆನ್ನೈ ಪ್ರವಾಸ ಕೈಗೊಂಡಿದ್ದಾರೆ ಎಂದಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್​.ಅಶೋಕ ವ್ಯಂಗ್ಯವಾಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿರುವ ಅಶೋಕ, '' ಸ್ವಾಮಿ ಡಿ.ಕೆ.ಶಿವಕುಮಾರ್ ಅವರೇ, ತಾವು ಚೆನ್ನೈ ಪ್ರವಾಸ ಕೈಗೊಂಡಿರುವುದು ಯಾವ ಪುರುಷಾರ್ಥಕ್ಕಾಗಿ ಎನ್ನುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ಡಿಸಿಎಂಗೆ ಕೆಲ ಪ್ರಶ್ನೆಗಳನ್ನೂ ಮುಂದಿಟ್ಟಿದ್ದಾರೆ''.

ಮರೀನಾ ಬೀಚ್​ನಲ್ಲಿ ಪಾದಯಾತ್ರೆ ಮಾಡಿ ಮೇಕೆದಾಟು ಯೋಜನೆಗೆ NOC ನೀಡುವಂತೆ ತಮಿಳುನಾಡು ಸಿಎಂ ಸ್ಟಾಲಿನ್ ಅವರ ಮೇಲೆ ಒತ್ತಡ ಹೇರುತ್ತೀರಾ?

ಮೇಕೆದಾಟು ಯೋಜನೆಗೆ ಅವಕಾಶ ಕೊಡುವುದಿಲ್ಲ ಎಂದು ಖಡಾಖಂಡಿತವಾಗಿ ತಮ್ಮ ಪ್ರಣಾಳಿಕೆಯಲ್ಲಿ ಹೇಳಿರುವ ಡಿಎಂಕೆ ಪಕ್ಷದ ನಾಯಕರ ನಟ್ಟು-ಬೋಲ್ಟು ಟೈಟು ಮಾಡುತ್ತೀರಾ?, ಅಥವಾ ತಮಿಳುನಾಡು ಸಿಎಂ ಸ್ಟಾಲಿನ್ ಅವರನ್ನ ಕೆ.ಆರ್.ಎಸ್ ನಲ್ಲಿ ಕಾವೇರಿ ಆರತಿಗೆ ಆಹ್ವಾನಿಸಿ, ಕಾವೇರಿ ನೀರನ್ನ ಕೊಳ್ಳೆ ಹೊಡೆದು ಕನ್ನಡಿಗರ ಹಿತಾಸಕ್ತಿಗೆ ಕೊಳ್ಳಿ ಇಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net