ಜಾತಿ ಗೊತ್ತಿಲ್ಲದವರು ಜಾತಿಗಣತಿ ಬಗ್ಗೆ ಮಾತನಾಡುತ್ತಾರೆ; ಅನುರಾಗ್​ ಠಾಕೂರ್​ ಹೇಳಿಕೆಗೆ ರಾಹುಲ್​ ಉತ್ತರಿಸಿದ್ದು ಹೀಗೆ

Untitled-design-2024-07-30T180443.397-1
Published on

ನವದೆಹಲಿ: ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ನೀಡಿದ ಹೇಳಿಕೆಯು ಲೋಕಸಭೆಯಲ್ಲಿ ಕೋಲಾಹಲ ಸೃಷ್ಟಿಸಿತು. ಜಾತಿ ಗೊತ್ತಿಲ್ಲದವರು ಜಾತಿ ಗಣತಿಯ ಬಗ್ಗೆ ಮಾತನಾಡುತ್ತಾರೆ ಎಂಬ ಅನುರಾಗ್ ಠಾಕೂರ್ ಅವರ ಹೇಳಿಕೆಗೆ ಅವರು ನನ್ನನ್ನು ನಿಂದಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದರು.

ಈ ದೇಶದಲ್ಲಿ ದಲಿತ ಮತ್ತು ಹಿಂದುಳಿದವರ ಸಮಸ್ಯೆ ಪರವಾಗಿ ಯಾರೇ ಮಾತನಾಡಿದರು ಅಥವಾ ಅವರಿಗಾಗಿ ಹೋರಾಡಿದರೆ ಇತರರ ನಿಂದನೆಗೆ ಗುರಿಯಾಗುತ್ತಾರೆ. ನನ್ನನ್ನು ನೀವು ಎಷ್ಟು ಬೇಕಾದರೂ ಅವಮಾನಿಸಬಹುದು. ನಾನು ಎಲ್ಲಾ ನಿಂದನೆಗಳನ್ನು ಸಂತೋಷದಿಂದ ತೆಗೆದುಕೊಳ್ಳುತ್ತೇನೆ. ಆದರೆ ಸಂಸತ್ತಿನಲ್ಲಿ ಜಾತಿ ಗಣತಿ ಮಸೂದೆಯನ್ನು ಅಂಗೀಕರಿಸುತ್ತೇವೆ ಎಂಬುದನ್ನು ನೀವು ಮರೆಯಬಾರದು ಎಂದು ಹೇಳಿದರು.

ಅನುರಾಗ್ ಠಾಕೂರ್ ನನ್ನನ್ನು ನಿಂದಿಸಿದ್ದಾರೆ ಮತ್ತು ಅವಮಾನಿಸಿದ್ದಾರೆ. ಆದರೆ ನಾನು ಅವರಿಂದ ಯಾವುದೇ ಕ್ಷಮೆಯನ್ನು ಬಯಸುವುದಿಲ್ಲ ಎಂದು ರಾಹುಲ್​ಗಾಂಧಿ ಹೇಳಿದರು.

ಆದರೆ ಅನುರಾಗ್ ಠಾಕೂರ್ ಅವರು ತಮ್ಮ ಹೇಳಿಕೆಯಲ್ಲಿ ಯಾರನ್ನೂ ಹೆಸರಿಸಿಲ್ಲ ಎಂದು ತಿಳಿಸಿದರು. ಜಾತಿ ಗೊತ್ತಿಲ್ಲದವರು ಜಾತಿ ಗಣತಿಯ ಬಗ್ಗೆ ಮಾತನಾಡುತ್ತಾರೆ. ಈ ಸದನದಲ್ಲಿಯೇ ಮಾಜಿ ಪ್ರಧಾನಿ ಆರ್‌ಜಿ-1 ಒಬಿಸಿಗಳಿಗೆ ಮೀಸಲಾತಿಯನ್ನು ವಿರೋಧಿಸಿದ್ದರು ಎಂಬುದನ್ನು ಸ್ಪೀಕರ್‌ಗೆ ನೆನಪಿಸಲು ಬಯಸುತ್ತೇನೆ ಎಂದು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಸದನದಲ್ಲಿ ಹೇಳಿದರು.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net