ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಬಾಲ್ ಪಾಯಿಂಟ್ ಪೆನ್ ಯಾವಾಗ ಬಳಸಬೇಕು? ಕೆಪಿಎಸ್‌ಸಿ ಹೇಳಿರುವುದೇನು?

KPSC
Published on

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ವಿವರಣಾತ್ಮಕ ಮಾದರಿಯ ಪರೀಕ್ಷೆಗಳಲ್ಲಿ ‘ಪ್ರಶ್ನೆ ಸಹಿತ ಉತ್ತರ ಪತ್ರಿಕೆಯ ಮುಖಪುಟದಲ್ಲಿನ ವಿವರಗಳನ್ನು ನೀಲಿ ಅಥವಾ ಕಪ್ಪು ಬಾಲ್ ಪಾಯಿಂಟ್ ಪೆನ್ನಿನಿಂದ ಮಾತ್ರ ಭರ್ತಿ ಮಾಡುವಂತೆ ಕೆಪಿಎಸ್‌ಸಿ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

ಪ್ರಶ್ನೆ ಸಹಿತ ಉತ್ತರ ಪತ್ರಿಕೆಯಲ್ಲಿ ಉತ್ತರಗಳನ್ನು ಬರೆಯಲು ಕಪ್ಪು ಅಥವಾ ನೀಲಿ ಶಾಯಿಯ ಯಾವುದೇ ವಿಧದ ಪೆನ್ನನ್ನು ಉಪಯೋಗಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net