‘ಕ್ರಶ್ಡ್’ ವೆಬ್ ಸರಣಿಯ ಪ್ರಚಾರದ ವೇಳೆ ನೀಡಿದ್ದ ಸಂದರ್ಶನದಲ್ಲಿ ಆಧ್ಯಾ ಆನಂದ್, ಕನ್ನಡ ಸಿನಿಮಾಗಳಲ್ಲಿ ನಟಿಸುವ ಆಸೆ ವ್ಯಕ್ತಪಡಿಸಿದ್ದರು. “ಕನ್ನಡ ನನ್ನ ಮಾತೃಭಾಷೆ. ಒಂದು ದಿನ ಕನ್ನಡ ಚಿತ್ರರಂಗದಲ್ಲಿ ನಟಿಸಲು ನನಗೆ ತುಂಬಾ ಇಷ್ಟ” ಎಂದು ಅವರು ಹೇಳಿದ್ದರು. ಈಗಾಗಲೇ ಹಿಂದಿ ಹಾಗೂ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಗುರುತು ಮೂಡಿಸಿರುವ ಆಧ್ಯಾ, ಮುಂದಿನ ದಿನಗಳಲ್ಲಿ ಕನ್ನಡ ಅಥವಾ ದಕ್ಷಿಣ ಭಾರತೀಯ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಾರೆಯೇ ಎಂಬ ಕುತೂಹಲವೂ ಅಭಿಮಾನಿಗಳಲ್ಲಿ ಮೂಡಿದೆ,(ಏಜೆನ್ಸೀಸ್).