ಮುಂದಿನ 13 ದಿನಗಳವರೆಗೆ ಈ 3 ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ: ಬರಲಿದೆ ಅನಿರೀಕ್ಷಿತ ಆದಾಯ! Zodiac Signs

Zodiac Signs
Published on

Zodiac Signs : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು ಕೂಡ ಇದ್ದಾರೆ. ಪ್ರತಿಯೊಂದು ಕೆಲಸ, ಕಾರ್ಯಗಳನ್ನು ಮಾಡಬೇಕಾದರೂ ಕೆಲವರು ಜೋತಿಷ್ಯದ ಮೊರೆ ಹೋಗುತ್ತಾರೆ. ಏಕೆಂದರೆ, ಮನುಷ್ಯನ ಒಳಿತು-ಕೆಡುಕು, ನಡೆ-ನುಡಿ ಎಲ್ಲದರ ಮೇಲೂ ಗ್ರಹಗಳು ಪ್ರಭಾವ ಬೀರುತ್ತವೆ. ಒಬ್ಬ ವ್ಯಕ್ತಿಯ ಭವಿಷ್ಯದ ಜೀವನ ಹೇಗಿರುತ್ತದೆ? ಆತನ ವಿಶಿಷ್ಟ ಗುಣಗಳು ಏನೆಂಬುದನ್ನು ಗ್ರಹಗತಿಗಳ ಆಧಾರದ ಮೇಲೆ ಸುಲಭ ಊಹಿಸಬಹುದಾಗಿದೆ. ಇದು ಬಹುತೇಕ ಸಂದರ್ಭಗಳಲ್ಲಿ ನಿಜವೂ ಆಗಿದೆ. ಹೀಗಾಗಿ ಜ್ಯೋತಿಷ್ಯವನ್ನು ಬಹುತೇಕ ಮಂದಿ ನಂಬುತ್ತಾರೆ.

ಗ್ರಹಗಳು ಸಾಮಾನ್ಯವಾಗಿ ಒಂದು ನಿರ್ದಿಷ್ಟ ಅವಧಿಯ ನಂತರ ತಮ್ಮ ಸ್ಥಾನಗಳನ್ನು ಬದಲಾಯಿಸುತ್ತವೆ. ಈ ರೀತಿ ಸ್ಥಾನ ಬದಲಾವಣೆ ಮಾಡುವಾಗ ಇದು ಎಲ್ಲ ರಾಶಿಚಕ್ರ ಚಿಹ್ನೆಗಳ ಮೇಲೆ ಪರಿಣಾಮ ಬೀರುತ್ತದೆ. ಕೆಲವು ಗ್ರಹಗಳ ಸ್ಥಾನ ಬದಲಾವಣೆ ಒಳ್ಳೆಯ ಫಲಿತಾಂಶಗಳನ್ನು ತಂದರೆ, ಕೆಲವು ಗ್ರಹಗಳ ಬದಲಾವಣೆ ಕೆಟ್ಟ ಫಲಿತಾಂಶಗಳನ್ನು ತರುತ್ತವೆ.

ಸದ್ಯ ರಾಕ್ಷಸರ ಅಧಿಪತಿಯಾದ ಶುಕ್ರ ಗ್ರಹ ಪ್ರಸ್ತುತ ಮೀನ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ಅಂದಹಾಗೆ ಶುಕ್ರ ಗ್ರಹ, ಸೌಂದರ್ಯ, ಐಷಾರಾಮಿ, ಪ್ರೀತಿ ಮತ್ತು ಸಂಪತ್ತಿನ ಸಂಕೇತವಾಗಿದೆ. ಮಾರ್ಚ್ 14ರಂದು ಸೂರ್ಯನು ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಹೀಗಾಗಿ, ಮೀನ ರಾಶಿಯಲ್ಲಿ ಶುಕ್ರ ಮತ್ತು ಸೂರ್ಯನ ಸಂಯೋಜನೆಯು ಶುಕ್ರಾದಿತ್ಯ ರಾಜಯೋಗವನ್ನು ಸೃಷ್ಟಿಸುತ್ತದೆ. ಈ ರಾಜಯೋಗದಿಂದ ಶುಭ ಫಲಿತಾಂಶಗಳನ್ನು ಅನುಭವಿಸುವ ರಾಶಿಚಕ್ರ ಚಿಹ್ನೆಗಳನ್ನು ನಾವೀಗ ನೋಡೋಣ.

ವೃಷಭ ರಾಶಿ

ವೃಷಭ ರಾಶಿಯ 11ನೇ ಮನೆಯಲ್ಲಿ ಶುಕ್ರಾದಿತ್ಯ ರಾಜಯೋಗವು ರೂಪುಗೊಳ್ಳುತ್ತದೆ. ಹೀಗಾಗಿ ಈ ರಾಶಿಯವರು ಕೈಗೊಳ್ಳುವ ಎಲ್ಲ ಕೆಲಸಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುತ್ತಾರೆ. ನೀವು ಕೆಲಸ ಮಾಡುವ ಕಚೇರಿಯಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಪ್ರಶಂಸಿಸಲಾಗುತ್ತದೆ. ಈ ಸಮಯದಲ್ಲಿ ನೀವು ಜೀವನದಲ್ಲಿ ಶಾಂತಿಯುತ ಪ್ರಗತಿಯನ್ನು ನೋಡುತ್ತೀರಿ. ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಇಂದಿನಿಂದ ನೀವು ಬಹಳಷ್ಟು ಹಣವನ್ನು ಉಳಿಸಲಿದ್ದೀರಿ.

ತುಲಾ ರಾಶಿ

ತುಲಾ ರಾಶಿಯ 6ನೇ ಮನೆಯಲ್ಲಿ ಶುಕ್ರಾದಿತ್ಯ ರಾಜಯೋಗ ಉಂಟಾಗಲಿದೆ. ನಿಮ್ಮ ಎಲ್ಲ ಕೆಲಸಗಳು ಯಶಸ್ವಿಯಾಗುತ್ತವೆ. ನೀವು ಎಲ್ಲೇ ಇದ್ದರೂ, ನಿಮ್ಮ ಸುತ್ತಮುತ್ತಲಿನವರೊಂದಿಗೆ ನಿಮಗೆ ಉತ್ತಮ ಸ್ನೇಹವಿರುತ್ತದೆ. ಕೆಲವರಿಗೆ ಸಂಬಳ ಹೆಚ್ಚಳ ಮತ್ತು ಬಡ್ತಿಗೆ ಅವಕಾಶಗಳಿವೆ. ವ್ಯವಹಾರದಲ್ಲಿ ತೊಡಗಿರುವವರು ತಮ್ಮ ಯೋಜನೆಗಳು ಯಶಸ್ವಿಯಾಗುತ್ತವೆ. ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ.

ಮಿಥುನ ರಾಶಿ

ಮಿಥುನ ರಾಶಿಯ 10ನೇ ಮನೆಯಲ್ಲಿ ಶುಕ್ರಾದಿತ್ಯ ರಾಜಯೋಗ ಉಂಟಾಗಲಿದೆ. ಈ ರಾಶಿಚಕ್ರದ ಜನರು ಕೈಗೊಂಡ ಕಾರ್ಯಗಳಲ್ಲಿ ಇದು ಉತ್ತಮ ಯಶಸ್ಸನ್ನು ತರುತ್ತದೆ. ವ್ಯಾಪಾರಿಗಳು ನಿರೀಕ್ಷೆಗಿಂತ ಉತ್ತಮ ಲಾಭ ಗಳಿಸುತ್ತಾರೆ. ಆರ್ಥಿಕ ಪರಿಸ್ಥಿತಿಯಲ್ಲಿ ಉತ್ತಮ ಪ್ರಗತಿ ಇರುತ್ತದೆ. ನೀವು ಬಯಸಿದ ವಸ್ತುವನ್ನು ಖರೀದಿಸಿ ಅದನ್ನು ಆನಂದಿಸಬಹುದು. ಪ್ರೀತಿ ಜೀವನವು ಸಿಹಿಯಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯಲು ನಿಮಗೆ ಅವಕಾಶ ಸಿಗುತ್ತದೆ.

ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ “ವಿಜಯವಾಣಿ ಡಾಟ್​ ನೆಟ್”​ ಜವಾಬ್ದಾರರಾಗಿರುವುದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net