

ಗುಜರಾತಿನ ಗಾಂಧಿನಗರದಲ್ಲಿ ನಡೆಯುತ್ತಿರುವ ಜಿ20 ಆರೋಗ್ಯ ಸಚಿವರ ಸಭೆಯ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ ಡಾ ಟೆಡ್ರೊಸ್, ತಮ್ಮ ಭಾಷಣದ ಆರಂಭದಲ್ಲಿ, ಜಿ 20 ಶೃಂಗಸಭೆಯನ್ನು ಆಯೋಜಿಸುವಲ್ಲಿ ಭಾರತದ ಆತಿಥ್ಯ ಮತ್ತು ದೂರದೃಷ್ಟಿಯ ನಾಯಕತ್ವಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
‘ಯುನಿವರ್ಸಲ್ ಹೆಲ್ತ್ ಕವರೇಜ್ ಮತ್ತು ಆಯುಷ್ಮಾನ್ ಭಾರತ್ ಯೋಜನೆಯನ್ನು ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆಯನ್ನಾಗಿ ಮುಂದುವರಿಸುವಲ್ಲಿ ಭಾರತವು ಇಟ್ಟ ಹೆಜ್ಜೆಗಳಿಗಾಗಿ ನಾನು ಶ್ಲಾಘಿಸುತ್ತೇನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಗುಜರಾತ್‌ನಲ್ಲಿ ಒದಗಿಸಲಾದ ಟೆಲಿಮೆಡಿಸಿನ್ ಸೌಲಭ್ಯಗಳನ್ನು ಶ್ಲಾಘಿಸಿದರಲ್ಲದೇ, ಶನಿವಾರ ಪ್ರಾರಂಭಿಸಲಿರುವ ಗ್ಲೋಬಲ್ ಡಿಜಿಟಲ್ ಹೆಲ್ತ್ ಇನಿಶಿಯೇಟಿವ್‌ಗಾಗಿ ಭಾರತದ G20 ಪ್ರೆಸಿಡೆನ್ಸಿಗೆ ಧನ್ಯವಾದ ಅರ್ಪಿಸಿದರು.
ಭಾರತದಲ್ಲಿನ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ನೀಡುತ್ತಿರುವ ಸೇವೆಯ ಬಗ್ಗೆಯೂ ತಮ್ಮ ಭಾಷಣದಲ್ಲಿ ಕೊಂಡಾಡಿದ ಡಾ ಟೆಡ್ರೊಸ್, ನಾನು ಇಲ್ಲಿ ಗಾಂಧಿನಗರದಲ್ಲಿರುವ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಕ್ಕೆ ಭೇಟಿ ನೀಡಿದ್ದೇನೆ. ಮತ್ತು HWC ಯಿಂದ 1000 ಮನೆಗಳಿಗೆ ಒದಗಿಸುತ್ತಿರುವ ಪ್ರಾಥಮಿಕ ಆರೋಗ್ಯ ಸೇವೆಗಳಿಂದ ಪ್ರಭಾವಿತನಾಗಿದ್ದೇನೆ ಎಂದು ಹೇಳಿದ್ದಾರೆ.
ಸ್ಥಳೀಯವಾಗಿ ಪ್ರಿಸ್ಕ್ರಿಪ್ಷನ್‌ಗಳು ಮತ್ತು ಚಿಕಿತ್ಸೆಯನ್ನು ಒದಗಿಸುವ ಟೆಲಿಮೆಡಿಸಿನ್ ಸೇವೆಗಳನ್ನು ನಾನು ಇಲ್ಲಿ ಶ್ಲಾಘಿಸುತ್ತೇನೆ. ಇದು ಆರೋಗ್ಯವನ್ನು ಉತ್ತಮ ಗುಣಮಟ್ಟಕ್ಕೆ ಪರಿವರ್ತಿಸುವ ಅತ್ಯುತ್ತಮ ಉದಾಹರಣೆಯಾಗಿದೆ.
ನಾಳೆ ಪ್ರಾರಂಭಿಸಲಿರುವ ಗ್ಲೋಬಲ್ ಡಿಜಿಟಲ್ ಹೆಲ್ತ್ ಇನಿಶಿಯೇಟಿವ್‌ನಲ್ಲಿ ನಾಯಕತ್ವ ವಹಿಸಿದ್ದಕ್ಕಾಗಿ ನಾನು ಇಂಡಿಯಾ G20 ಪ್ರೆಸಿಡೆನ್ಸಿಗೆ ಧನ್ಯವಾದ ಹೇಳುತ್ತೇನೆ ಎಂದು ಹೇಳಿದ್ದಾರೆ.