ನೀಟ್​ ಪರೀಕ್ಷೆ ರದ್ದು ಮಾಡಲ್ಲ: ಯಾಕೆಂದು ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

Untitled design - 2024-06-22T134405.601
Published on

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ವ್ಯಾಪಕ ಆರೋಪಗಳ ಮೇರೆಗೆ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಇದರಿಂದ ವಿದ್ಯಾರ್ಥಿಗಳು ಸಿಡಿಮಿಡಿಗೊಂಡಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಿ, ತನಿಖೆ ಪಾರದರ್ಶಕವಾಗಿರಲಿ ಎಂದು ಆಗ್ರಹಿಸಿದ್ದರು. ಅದರಂತೆಯೇ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಗೋವಿಂದ್ ಜೈಸ್ವಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

9 ಲಕ್ಷಕ್ಕೂ ಅಧಿಕ ಸಂಖ್ಯೆಯ ಅಭ್ಯರ್ಥಿಗಳು ಯುಜಿಸಿ-ನೆಟ್​ ಪರೀಕ್ಷೆ ಬರೆದಿದ್ದಾರೆ. ತೀವ್ರ ವಿವಾದ ಮತ್ತು ಪರೀಕ್ಷೆಗೂ ಮುನ್ನ ಪತ್ರಿಕೆ ಸೋರಿಕೆಯಾದ ಬಗ್ಗೆ ನಡೆಯುತ್ತಿರುವ ತನಿಖೆಯ ಹೊರತಾಗಿಯೂ ಇದೀಗ ವೈದ್ಯಕೀಯ ಪ್ರವೇಶ ಪರೀಕ್ಷೆ (NEET) ಅನ್ನು ರದ್ದುಗೊಳಿಸದಿರಲು ಸರ್ಕಾರ ನಿರ್ಧರಿಸಿದೆ. ಈ ನಿಲುವನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಸೋರಿಕೆಯು ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳ ಮೇಲೆ ಮಾತ್ರ ಪರಿಣಾಮ ಬೀರಿದೆ ಎಂದಿದ್ದಾರೆ.

"ಇದು 2004 ಮತ್ತು 2015ರ ಹಿಂದಿನ ಘಟನೆಗಳಿಗೆ ತೀವ್ರವಾಗಿ ವ್ಯತಿರಿಕ್ತವಾಗಿದೆ. ಅಲ್ಲಿ ವ್ಯಾಪಕವಾದ ಸೋರಿಕೆಯು ಪರೀಕ್ಷೆಯ ರದ್ದತಿಗೆ ಕಾರಣವಾಯಿತು. ಎಕ್ಸಾಂ ರದ್ದುಗೊಳಿಸುವುದರಿಂದ ಸರಿಯಾದ ರೀತಿಯಲ್ಲಿ ಉತ್ತೀರ್ಣರಾದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಹಾಗಾಗಿ ನ್ಯಾಯಾಲಯವು ತೆಗೆದುಕೊಳ್ಳುವ ಯಾವುದೇ ನಿರ್ಧಾರ ಅಂತಿಮವಾಗಿರಲಿದೆ" ಎಂದು ಹೇಳಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net