ತಪ್ಪು ಮಾಡಿದ್ದರೆ ತಾನೇ ಹೆದರೋದು: ಗವರ್ನರ್​ ನೋಟಿಸ್​ಗೆ ಸಿಟ್ಟಾದ ಸಿಎಂ ಸಿದ್ದರಾಮಯ್ಯ

ವಿಜಯವಾಣಿ - 2024-08-02T134704.469
Published on

ಮೈಸೂರು: ಇಂದು ಮೈಸೂರಿನಲ್ಲಿ ರಾಜ್ಯಪಾಲರು ನೀಡಿದ್ದ ನೋಟಿಸ್​ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇದಕ್ಕೆಲ್ಲ ನಾನು ಹೆದ್ದರಲ್ಲ? ನಾವು ಇದನ್ನೆಲ್ಲ ಹೆದರಿಸಲು ಸಿದ್ಧರಾಗಿದ್ದೇವೆ‌. ತಪ್ಪು ಮಾಡಿದ್ದರೆ ತಾನೇ ಹೆದರೋದು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಅದು ಗೊತ್ತಿದೆ. ಜೆಡಿಎಸ್, ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ ಎಂದರು.

"136 ಶಾಸಕರ ಬೆಂಬಲದಿಂದ ನಾನು ಸಿಎಂ ಆಗಿದ್ದೇನೆ. ಈ ಆರೋಪದಲ್ಲಿ ನನ್ನ ಪಾತ್ರ ಇಲ್ಲ. ಆದರೆ ನನ್ನ ಆರೋಪ ಇಲ್ಲದಿದ್ದರೂ ಸರ್ಕಾರ ಅಸ್ಥಿರಗೊಳಿಸೋದಕ್ಕೆ ಯತ್ನಿಸಿದ್ದಾರೆ. ರಾಜ್ಯಪಾಲರಿಗೆ ಸಲಹೆ ನೀಡುವವರು ಯಾರು. ಕೇಂದ್ರ ಸರ್ಕಾರ ತಾನೆ? ಈ ಮೂಲಕ

ರಾಜಭವನ ಹಾಗೂ ರಾಜ್ಯಪಾಲರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರ ನೋಟಿಸ್​ಗೆ ನಾನ್ಯಾಕೆ ಹೆದರಲಿ.

ಅಶೋಕ್ ಹೆದರಿರಬೇಕು, ಅವರಿಗೆ ಭಯ, ನನಗಲ್ಲ" ಎಂದು ತಿರುಗೇಟು ನೀಡಿದರು.

"ಟಿ.ಜೆ. ಅಹ್ರಾಂ ಒಬ್ಬ ಬ್ಲಾಕ್ ಮೇಲರ್. ಜುಲೈ 26ರ ಬೆಳಗ್ಗೆ 11:30ಕ್ಕೆ ದೂರು ಕೊಡ್ತಾನೆ. ಆ ದೂರಿನ ಪರಾಮರ್ಶೆ ಮಾಡದೇ ಆ ದಿನ ಸಂಜೆಯೇ ಶೋಕಾಸ್ ನೋಟಿಸ್ ರೆಡಿ ಇದೆ ಬಂದು ಪಡೆದುಕೊಳ್ಳಿ ಅಂತಾ ನಮ್ಮ ಅಧಿಕಾರಿ ಎಲ್‌.ಕೆ ಅತೀಕ್​ಗೆ ಹೇಳ್ತಾರೆ. ಜೊಲ್ಲೆ, ಮುರುಗೇಶ್ ನಿರಾಣಿ, ಜರ್ನಾರ್ಧನ ರೆಡ್ಡಿ ವಿರುದ್ಧದ ದೂರು ಇನ್ನೂ ಹಾಗೆಯೇ ಇವೆ. ಅವರಿಗ್ಯಾಕೆ ಶೋಕಾಸ್ ನೋಟಿಸ್ ಕೊಟ್ಟಿಲ್ಲ? ನನಗೆ ಯಾಕೆ ತರಾತುರಿಯಲ್ಲಿ ನೋಟಿಸ್ ಕೊಟ್ಟಿದ್ದಾರೆ" ಎಂದು ಪ್ರಶ್ನಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net