ಗೆಳೆಯನ ಮನೆಯಲ್ಲಿ ಶವವಾಗಿ ಪತ್ತೆಯಾದ ಮಕ್ಕಳು; ಕತ್ತು ಕುಯ್ದ ಸ್ಥಿತಿಯಲ್ಲಿ ಪತ್ನಿ ಪತ್ತೆ!

crime guns
Published on

ತಮಿಳುನಾಡು: ತಮಿಳುನಾಡಿನ ತಿರುವಳ್ಳೂರಿನಲ್ಲಿ ಮಂಗಳವಾರ ಇಬ್ಬರು ಪುಟ್ಟ ಮಕ್ಕಳು ಬಾಯಿಗೆ ಟೇಪ್ ಬಿಗಿಯಲಾಗಿದ್ದು ಶವವಾಗಿ ಪತ್ತೆಯಾಗಿದ್ದಾರೆ. ಮಕ್ಕಳ ತಾಯಿಯ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಸ್ಸಾಂನ ದ್ವಾರಕಾ ಭರ್ ಜಗನಾಥಪುರಂನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಸುಮಿತಾ ಭರ್, ನಾಲ್ಕು ವರ್ಷದ ಮಗ ಮತ್ತು ಒಂದು ವರ್ಷದ ಮಗಳೊಂದಿಗೆ ವಾಸಿಸುತ್ತಿದ್ದರು. ಮಂಗಳವಾರ ರಾತ್ರಿ ದ್ವಾರಕಾ ಅವರು ಕೆಲಸ ಮುಗಿಸಿ ಮನೆಗೆ ಬಂದಾಗ ಹೆಂಡತಿ ಮಕ್ಕಳು ಕಾಣಿಸಿಕೊಂಡಿಲ್ಲ. ಅಕ್ಕಪಕ್ಕದವರಲ್ಲಿ ವಿಚಾರಿಸಿದಾಗ, ಆತನ ಸ್ನೇಹಿತ ಗುಡುಲು ಮನೆಗೆ ಹೋಗಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಆಧರಿಸಿ, ದ್ವಾರಕಾ ತನ್ನ ಸ್ನೇಹಿತನ ಮನೆಗೆ ತಲುಪಿದಾಗ ಅಲ್ಲಿ ಬಾಗಿಲಿಗೆ ಬೀಗ ಹಾಕಿರುವುದು ಕಂಡುಬಂದಿದೆ. ಇದಿರಂದ ಚಿಂತಿತರಾದ ಅವರು ಕಿಟಕಿಯ ಮೂಲಕ ಇಣುಕಿ ನೋಡಿದಾಗ ಅವರ ಪತ್ನಿಯ ಕುತ್ತಿಗೆ ಸೀಳಲಾಗಿದ್ದು ಮಕ್ಕಳು ನೆಲದ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡಿದ್ದಾರೆ.

ತಕ್ಷಣ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು ನಂತರ ಅವರು ಸ್ಥಳಕ್ಕೆ ತಲುಪಿದ್ದಾರೆ. ಈ ಬಳಿಕ ಪೊಲೀಸರು ಗುಡುಲು ಅವರ ಮನೆಗೆ ಪ್ರವೇಶಿಸಿದ್ದಾರೆ. ಈ ಸಂದರ್ಭ ಪತ್ನಿ ಸುಮಿತಾ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ದ್ವಾರಕಾ ಅವರ ಮಕ್ಕಳು ಬಾಯಿಗೆ ಟೇಪ್ ಹಾಕಲಾಗಿದ್ದು ಅವರು ನೆಲದ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ಕೂಡಲೇ ಪತ್ನಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಅಕ್ರಮ ಸಂಬಂಧವೇ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ತಲೆಮರೆಸಿಕೊಂಡಿರುವ ಗುಡುಲು ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ.(ಏಜೆಎನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net