ಹೆಂಡ್ತಿ-ಮಕ್ಕಳ ಮೇಲೆ ಹಲ್ಲೆ ಮಾಡಿ ತಾನೇ ಸತ್ತ; ಸಾವಿಗೀಡಾದವರ ಸಂಖ್ಯೆ ಮೂರಕ್ಕೇರಿಕೆ, ಇನ್ನಿಬ್ಬರ ಪರಿಸ್ಥಿತಿ ಗಂಭೀರ

crime guns
Published on

ಹುಬ್ಬಳ್ಳಿ: ದಾಂಪತ್ಯ ಕಲಹ ಒಂದೇ ಕುಟುಂಬದ ಮೂವರನ್ನು ಬಲಿ ಪಡೆದುಕೊಂಡಿದೆ. ಹೆಂಡತಿ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಆತನ ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.

ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಪಕ್ಕೀರಪ್ಪ ಮಾದರ ತನ್ನ ಹೆಂಡತಿ ಹಾಗೂ ಮೂವರು ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ. ಪತ್ನಿ ಮುದಕವ್ವ, ಮಕ್ಕಳಾದ ಶ್ರಾವಣಿ (8), ಶ್ರೇಯಸ್ (6) ಹಾಗೂ 4 ವರ್ಷದ ಸೃಷ್ಟಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದ.

ಗಂಭೀರವಾಗಿ ಗಾಯಗೊಂಡಿದ್ದ ಮುದುಕವ್ವ ಹಾಗೂ ಮಕ್ಕಳನ್ನು ಕಿಮ್ಸ್​ನಲ್ಲಿ ದಾಖಲಿಸಲಾಗಿತ್ತು. ಬೆಳಗ್ಗೆ ಚಿಕಿತ್ಸೆ ಫಲಿಸದೆ ಶ್ರೇಯಸ್ ಮೃತಪಟ್ಟಿದ್ದರೆ, ಇದೀಗ ಸೃಷ್ಟಿ ಕೂಡ ಸಾವಿಗೀಡಾಗಿದ್ದಾಳೆ. ಮೂವರು ಮಕ್ಕಳಲ್ಲಿ ಇಬ್ಬರು ಸಾವಿಗೀಡಾಗಿದ್ದರೆ, ಪತ್ನಿ ಹಾಗೂ ಇನ್ನೊಬ್ಬಳು ಪುತ್ರಿಯ ಪರಿಸ್ಥಿತಿ ಗಂಭೀರವಾಗಿದೆ.

ಹೆಂಡತಿಯ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದ್ದನ್ನು ಮಕ್ಕಳು ನೋಡಿದ್ದಕ್ಕೆ, ಈತ ಮೂವರು ಮಕ್ಕಳ ಮೇಲೂ ಕೊಡಲಿ ಬೀಸಿದ್ದ. ಆ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದ. ಘಟನೆಗೆ ಕಾರಣವೇನು ಎಂಬ ಬಗ್ಗೆ ನಿಖರವಾದ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net