

ಕಲಬುರಗಿ: ದಾಂಪತ್ಯದಲ್ಲಿ ಪದೇ ಪದೇ ಉಂಟಾಗುತ್ತಿದ್ದ ಕಲಹದಿಂದ ಕುಪಿತಗೊಂಡ ಪತಿ ಹೆಂಡತಿಯ ಹಣೆಗೆ ಗುಂಡಿಟ್ಟು ಹತ್ಯೆಗೈದ ಘಟನೆ ಕಲಬುರಗಿ ಜಿಲ್ಲೆಯ, ಚಿತ್ತಾಪುರ ತಾಲೂಕಿನ ಅಲ್ಲೂರ್ ಗ್ರಾಮದಲ್ಲಿ ಸಂಭವಿಸಿದೆ.
ಸಂಸಾರದಲ್ಲಿ ದಿನನಿತ್ಯ ನಡೆಯುತ್ತಿದ್ದ ಕಲಹದಿಂದ ಬೇಸತ್ತ ಪತ್ನಿ, ಕಳೆದ ಕೆಲವು ದಿನಗಳಿಂದ ತನ್ನ ತವರು ಮನೆಯಲ್ಲಿ ವಾಸವಿದ್ದರು. ಈ ವೇಳೆ ಹೆಂಡತಿಯ ತವರಿಗೆ ಹೋದ ಪತಿ ಬಸವರಾಜ್, ಆಕೆಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾನೆ.
ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು ಹನಮವ್ವ (36) ಎಂದು ಗುರುತಿಸಲಾಗಿದ್ದು, ಆರೋಪಿ ಬಸವರಾಜ್ನನ್ನು ಸದ್ಯ ಚಿತ್ತಾಪೂರ ಪೊಲೀಸ್ ಠಾಣೆಯ ಅಧಿಕಾರಿಗಳು ಬಂಧಿಸಿದ್ದಾರೆ,(ಏಜೆನ್ಸೀಸ್).