ಸುಳ್ಳುಗಾರ ಮೋದಿ ಪರ ಪ್ರಚಾರ ಮಾಡಿದ್ದಕ್ಕಾಗಿ ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತೇನೆ: Subramanian Swamy

Subramanian Swamy
Published on

ನವದೆಹಲಿ: ಪ್ರಧಾನಿ ಮೋದಿ ಒಬ್ಬ ಸುಳ್ಳುಗಾರ ಅವರ ಪರ 2014ರಲ್ಲಿ ಪ್ರಚಾರ ಮಾಡಿದ್ದಕ್ಕೆ ನಾನು ಪ್ರಾಯಶ್ಚಿತ ಮಾಡಿಕೊಳ್ಳುತ್ತೇನೆ ಎಂದು ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್​ ಸ್ವಾಮಿ (Subramanian Swamy) ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಸ್ವಾಮಿ (Subramanian Swamy), ಮೋದಿ ಅಕ್ಬರ್ ಎಂದಾದರೆ, ಆತನಿಗೆ ಸರಸ್ವವನ್ನೂ ಸಮರ್ಪಿಸುವ ಬೀರ್‌ಬಲ್ ಆಗಲು ನಾನು ಒಪ್ಪುವುದಿಲ್ಲ. ಪ್ರಧಾನಿಯಾದ ಮೊದಲ 15 ದಿನಗಳಲ್ಲಿ ವಿದೇಶಿ ಬ್ಯಾಂಕ್‌ಗಳಲ್ಲಿನ ಕಪ್ಪು ಹಣವನ್ನು ಮರಳಿ ಸ್ವದೇಶಕ್ಕೆ ತರುವುದಾಗಿ ಮೋದಿ ಭರವಸೆ ನೀಡಿದ್ದರು. ಅದು ಈವರೆಗೆ ಸಾಧ್ಯವಾಗಿಲ್ಲ. 2014ರಲ್ಲಿ ಅವರ ಪರ ಪ್ರಚಾರ ಮಾಡಿದ್ದಕ್ಕಾಗಿ ನಾನು ಪ್ರಾಯಶ್ಚಿತ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.

ವಿರಾಟ್ ಹಿಂದೂಸ್ತಾನ್ ಸಂಗಮ್ (ವಿಎಚ್‌ಎಸ್) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ (Jagadish Shetty) ಅವರು ಕಾಂಗ್ರೆಸ್‌ ರಾಹುಲ್ ಗಾಂಧಿಯವರ (Rahul Gandhi) ಪೌರತ್ವ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್​ ಸ್ವಾಮಿ (Subramanian Swamy) ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಹಿರಿಯ ಬಿಜೆಪಪಿ ನಾಯಕ ಸುಬ್ರಮಣಿಯನ್​ ಸ್ವಾಮಿ (Subramanian Swamy) ಸ್ವಪಕ್ಷೀಯರ ವಿರುದ್ಧವೇ ನಿರಂತರ ವಾಗ್ದಾಳಿ ನಡೆಸುತ್ತಿದ್ದು, ಮುಖ್ಯವಾಗಿ ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿಕೊಂಡು ಟ್ವೀಟ್​ ಮಾಡುತ್ತಿದ್ದಾರೆ. ಕೆಲ ದಿನಗಳ ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್​ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net