

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಐದೇ ವರ್ಷಗಳಲ್ಲಿ ಸುವರ್ಣ ಬಂಗಾಳವನ್ನು ನಿರ್ಮಾಣ ಮಾಡುತ್ತೇವೆ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ. ಬಂಗಾಳದಲ್ಲಿ ತಮ್ಮ ಎರಡು ದಿನಗಳ ಪ್ರವಾಸದ ಮುಕ್ತಾಯದ ಸಂದರ್ಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
ಇನ್ನು ಆರು ತಿಂಗಳಲ್ಲಿ ಬಂಗಾಳದಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅವರು ಈಗಲೇ ದಾಳ ಎಸೆದಿದ್ದಾರೆ. ಮುಂದಿನ ಸಲ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 200ಕ್ಕೂ ಹೆಚ್ಚಿನ ಸೀಟುಗಳೊಂದಿಗೆ ಸರ್ಕಾರ ರಚಿಸಲಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಮ್ಮನ್ನು ಆಶೀರ್ವದಿಸಿದ ಜನರು ಇದರಲ್ಲೂ ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿನ ಗಡಿಗಳಲ್ಲಿ ಭದ್ರತೆ ಇಲ್ಲ. ಹೀಗಾಗಿ ನುಸುಳುವಿಕೆ ಮುಂದುವರಿದಿದೆ ಎಂದ ಅವರು, ನಮ್ಮ ಮುಖ್ಯ ಗುರಿ ಪಶ್ಚಿಮ ಬಂಗಾಳದ ಅಭಿವೃದ್ಧಿ. ಬಿಜೆಪಿ ಅಧಿಕಾರಕ್ಕೆ ಬಂದ ಐದೇ ವರ್ಷಗಳಲ್ಲಿ ಸುವರ್ಣ ಬಂಗಾಳವನ್ನು ನಿರ್ಮಿಸುತ್ತೇವೆ ಎಂಬ ಭರವಸೆ ನೀಡಿದ್ದಾರೆ. (ಏಜೆನ್ಸೀಸ್)