ಪಾಕಿಸ್ತಾನಕ್ಕೆ ಒಂದೇ ಒಂದು ಹನಿ ನೀರು ಬಿಡುವುದಿಲ್ಲ; ಜಲಶಕ್ತಿ ಸಚಿವ ಸಿ.ಆರ್​.ಪಾಟೀಲ್ | Pahalgam Terror Attack

dk-2025-04-25t221806576-680bbcdf093f4
Published on

Pahalgam Terror Attack : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಪಾತ್ರಕ್ಕೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನಕ್ಕೆ ಒಂದು ಹನಿ ನೀರು ಹರಿಯಲು ಬಿಡುವುದಿಲ್ಲ ಎಂದು ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಶುಕ್ರವಾರ ಹೇಳಿದ್ದಾರೆ.

"ಭಾರತದಿಂದ ಪಾಕಿಸ್ತಾನಕ್ಕೆ ಒಂದೇ ಒಂದು ಹನಿ ನೀರು ಹರಿಯದಂತೆ ನಾವು ಖಚಿತಪಡಿಸಿಕೊಳ್ಳುತ್ತೇವೆ" ಎಂದಿದ್ದಾರೆ.

1960ರ ಪಾಕಿಸ್ತಾನದೊಂದಿಗಿನ ಸಿಂಧೂ ಜಲ ಒಪ್ಪಂದವನ್ನು ಭಾರತ ಸ್ಥಗಿತಗೊಳಿಸಿದ ನಂತರ ಮುಂದಿನ ಕ್ರಮಗಳ ಕುರಿತು ಚರ್ಚಿಸಲು ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ನಂತರ ಸಚಿವರು ಈ ಹೇಳಿಕೆಗಳನ್ನು ನೀಡಿದ್ದಾರೆ.

ಪಾಟೀಲ್ ಅವರಲ್ಲದೆ, ಹಲವಾರು ಸಚಿವಾಲಯಗಳ ಹಿರಿಯ ಅಧಿಕಾರಿಗಳು ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ್ದರು ಎಂದು ವರದಿಯಾಗಿದೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net