Bihar Election | ಎನ್​ಡಿಎ ಗೆಲುವು ಗುಲಾಮಗಿರಿಯನ್ನು ಅಳಿಸಿ ಹಾಕಲಿದೆ; ಅಧಿಕಾರಕ್ಕೆ ಬರುತ್ತಿದ್ದಂತೆ ಮೊಹಿಯುದ್ದೀನ್‌ "ಮೋಹನ್ ನಗರ"

Yogi Adityanath
Published on

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿನ (Bihar Election)ಎನ್‌ಡಿಎ ಗೆಲುವು ಗುಲಾಮಗಿರಿಯ ಎಲ್ಲ ಸಂಕೇತಗಳನ್ನು ಅಳಿಸಿ ಹಾಕಲಿದ್ದು, ಮತ್ತು ಸಮಷ್ಟಿಪುರ ಜಿಲ್ಲೆಯ ಮೊಹಿಯುದ್ದೀನ್‌ನಗರವನ್ನು "ಮೋಹನ್ ನಗರ" ಎಂದು ಮರುನಾಮಕರಣ ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಮೊದಲ ಹಂತದ ಚುನಾವಣೆಯ ಪ್ರಚಾರದ ಕೊನೆಯ ದಿನ ಮಾತನಾಡಿದ ಸಿಎಂ ಯೋಗಿ, ಸಹೋದರ ಸಹೋದರಿಯರೇ, ಮೊಹಿಯುದ್ದೀನ್ ನಗರವನ್ನು ಮೋಹನ್ ನಗರ ಎಂದು ಮರುನಾಮಕರಣ ಮಾಡುವ ದಿಕ್ಕಿನಲ್ಲಿ ಮುಂದುವರಿಯಬೇಕೆಂದು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ. ಗುಲಾಮಗಿರಿಯ ಎಲ್ಲಾ ಚಿಹ್ನೆಗಳನ್ನು ಬಿಟ್ಟುಬಿಡಿ. ಉತ್ತರ ಪ್ರದೇಶದಲ್ಲಿ ನಾವು ಫೈಜಾಬಾದ್ ಅನ್ನು ಅಯೋಧ್ಯೆ ಮತ್ತು ಅಲಹಾಬಾದ್ ಅನ್ನು ಪ್ರಯಾಗ್‌ರಾಜ್ ಎಂದು ಮರುನಾಮಕರಣ ಮಾಡಿದ್ದೇವೆ ಎಂದು ಹೇಳಿದರು.

ದೃಢನಿಶ್ಚಯದ ನಾಯಕರು ಅಧಿಕಾರಕಕ್ಕೆ ಬಂದರೆ, ಯುವಕರಿಗೆ ಉದ್ಯೋಗ ಸೃಷ್ಟಿಸುವ ದಿಕ್ಕಿನಲ್ಲಿ ಅಥವಾ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ದಿಕ್ಕಿನಲ್ಲಿ ಕಾರ್ಯನಿರ್ವಹಿಸುತ್ತಾರೆ ಎಂದು ಹೇಳಿದರು. ಮೊಹಿಯುದ್ದೀನ್ ಕ್ಷೇತ್ರದಲ್ಲಿ ಹಾಲಿ ಶಾಸಕ ರಾಜೇಶ್ ಕುಮಾರ್ ಸಿಂಗ್​ಗೆ ಬಿಜೆಪಿ ಟಿಕೆಟ್ ನೀಡಿದ್ದು, ಅವರ ವಿರುದ್ಧ ಆರ್‌ಜೆಡಿಯ ಎಜ್ಯಾ ಯಾದವ್ ಕಣಕ್ಕಿಳಿದಿದ್ದಾರೆ. ಯಾದವ್​ 2015 ರಲ್ಲಿ ಇಲ್ಲಿದ್ದಂಲೇ ಗೆಲುವು ಸಾಧಿಸಿ ವಿಧಾನಸಭೆ ಪ್ರವೇಶಿಸಿದ್ದರು.

ಬಿಹಾರ ವಿಧಾನಸಭಾ ಚುನಾವಣೆಗಳು ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14 ಫಲಿತಾಂಶ ಹೊರಬೀಳಲಿದೆ. ಮಹಾಘಟಬಂದನ್​ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ವಿಪಕ್ಷ ನಾಯಕ ತೇಜಸ್ವಿ ಯಾದವ್​ ಹೆಸರನ್ನು ಘೋಷಿಸಲಾಗಿದ್ದು, ಇತ್ತ ಎನ್​ಡಿಎ ಮೈತ್ರಿಕೂಟ ಯಾರನ್ನು ತನ್ನ ಸಿಎಂ ಅಭ್ಯರ್ಥಿಯಾಗಿ ಆಯ್ಕೆ ಮಾಡಿಲ್ಲ, ಆದರೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಅನೇಕ ನಾಯಕರು, ಮುಖ್ಯಮಂತ್ರಿ ನಿತೀಶ್​ ಕುಮಾರ್​ ನೇತೃತ್ವದಲ್ಲಿ ಚುನಾವಣೆ ಎದುರಿಸುವುದಾಗಿ ತಿಳಿಸಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net