ಮೈಸೂರು, ಚಾ.ನಗರ ಅಭಿವೃದ್ಧಿಗೆ ಕೈ ಅಭ್ಯರ್ಥಿಗಳನ್ನು ಗೆಲ್ಲಿಸಿ

BJP Congress
Published on

ಮೈಸೂರು: ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಲಕ್ಷ್ಮಣ್ ಹಾಗೂ ಸುನೀಲ್ಬೋಸ್ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮಾಜಿ ಎಂಎಲ್‌ಸಿ ಮರಿತಿಬ್ಬೇಗೌಡ ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ನಾಡಿನ ಅಭಿವೃದ್ಧಿಗೆ ಸಾಕಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ. ಎರಡನೇ ಬಾರಿಗೆ 10 ತಿಂಗಳ ಅವಧಿಯಲ್ಲಿ ಚುನಾವಣಾ ಪೂರ್ವದಲ್ಲಿ ಕೊಟ್ಟ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದ್ದಾರೆ. ಮೈಸೂರು-ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. 2024-25ನೇ ಸಾಲಿನ ಬಜೆಟ್‌ನಲ್ಲಿ ಗ್ಯಾರಂಟಿಗಳಿಗೆ 53 ಸಾವಿರ ಕೋಟಿ ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗೆ 89 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಕಾಂಗ್ರೆಸ್ ಮುಖಂಡ ಬಿ.ಎಂ. ರಾಮು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net