

ಬೆಂಗಳೂರು: ಚಂಡಮಾರುತ ಪರಿಣಾಮದಿಂದ ತಾಪಮಾನದಲ್ಲಿ ಏರಳಿತದಿಂದ ರಾಜ್ಯದಲ್ಲಿ ಚಳಿ ಇನ್ನಷ್ಟು ಹೆಚ್ಚಳವಾಗಲಿದೆ. ಮೋಡ ಕವಿದ ವಾತಾವರಣ, ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಉಷ್ಣಾಂಶ ಏರಿಳಿತ ಹಾಗೂ ಹೆಚ್ಚು ಗಾಳಿ ಬೀಸುತ್ತಿರುವುದರಿಂದ ಚಳಿ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶನಿವಾರ ಬೀದರ್‌ನಲ್ಲಿ ಕನಿಷ್ಠ ತಾಪಮಾನದಲ್ಲಿ 9.0, ದಾವಣಗೆರೆಯಲ್ಲಿ 11.8, ಹಾಸನದಲ್ಲಿ 14.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಳೆದ 10 ದಿನಗಳಲ್ಲಿ ನಿಸಾರ್ ಹಾಗೂ ಬರೇವಿ ಚಂಡಮಾರುತ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಏರಿಳಿತವಾಗುತ್ತಿದೆ. ಹಾಗಾಗಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಚಳಿ ಇರಲಿದೆ. ಬುರೇವಿ ಚಂಡಮಾರುತಗಳು ಈಗಾಗಲೇ ಕ್ಷೀಣವಾಗಿದ್ದು, ರಾಜ್ಯದಲ್ಲಿ ಮುಂದಿನ 2 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.