ಚಾಲಕನಿಗೆ ಚಪ್ಪಲಿಯಿಂದ ಹೊಡೆದಿದ್ದ ಮಹಿಳೆ ಬಂಧನ, ಬಿಡುಗಡೆ

Arrest
Arrest
Published on

ಬೆಂಗಳೂರು: ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದು ದರ್ಪ ತೋರಿದ್ದ ಹೊರ ರಾಜ್ಯದ ಮಹಿಳೆಯನ್ನು ಬೆಳ್ಳಂದೂರು ಠಾಣೆ ಪೊಲೀಸರು ಭಾನುವಾರ ಬಂಧಿಸಿ, ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಬಿಹಾರ ಮೂಲದ ಂಕೂರಿ ಮಿಶ್ರಾ ಆರೋಪಿ ಮಹಿಳೆ.

ಮಿಶ್ರಾ ಂಕೂರಿ ಅವರು ಸ್‌ಟಾವೇರ್ ಇಂಜಿನಿಯರ್ ಆಗಿದ್ದು, ಬೆಳ್ಳಂದೂರು ಬಳಿಯ ಗ್ರೀನ್ ಗ್ಲೆನ್ ಲೇಔಟ್‌ನಲ್ಲಿ ವಾಸವಾಗಿದ್ದಾರೆ. ಗರ್ಭಿಣಿಯಾಗಿರುವ ಅವರು ಶನಿವಾರ ಮಧ್ಯಾಹ್ನ ಬೆಳ್ಳಂದೂರು ಸೆಂಟ್ರಲ್ ಮಾಲ್ ಬಳಿ ಲೋಕೇಶ್ ಎಂಬ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದು ಪರಾರಿಯಾಗಿದ್ದರು.

ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುತ್ತಿದ್ದ ಂಕೂರಿ ಅವರು ಸೆಂಟ್ರಲ್ ಮಾಲ್ ಬಳಿ ಏಕಾಏಕಿ ವಾಹನ ನಿಲ್ಲಿಸಿದ್ದರು. ಈ ವೇಳೆ ಹಿಂದೆ ಬರುತ್ತಿದ್ದ ಲೋಕೇಶ್ ಅವರ ಆಟೋ, ಂಕೂರಿ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು ಎನ್ನಲಾಗಿದೆ. ಇದರಿಂದ ಕೋಪಗೊಂಡ ಅವರು ಲೋಕೇಶ್ ಅವರಿಗೆ ಅವಾಚ್ಯವಾಗಿ ನಿಂದಿಸಿದ್ದರು. ಆಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಂಕೂರಿ, ಸ್ಥಳದಲ್ಲಿ ಜಮಾಯಿಸಿದ್ದ ಸಾರ್ವಜನಿಕರ ಎದುರೇ ಲೋಕೇಶ್ ಅವರಿಗೆ ಚಪ್ಪಲಿಯಿಂದ ಹೊಡೆದು ಅಲ್ಲಿಂದ ಹೊರಟು ಹೋಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಸಂಬಂಧ ಲೋಕೇಶ್ ದೂರು ಕೊಟ್ಟಿದ್ದರು. ಂಕೂರಿ ಅವರ ದುಂಡಾವರ್ತಿಯ ವಿಡಿಯೋವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋದಲ್ಲಿ ಸೆರೆಯಾಗಿದ್ದ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯನ್ನು ಆಧರಿಸಿ ಅವರನ್ನು ಪತ್ತೆ ಮಾಡಿ, ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಲಾಗಿತ್ತು. ಇದರ ಬೆನ್ನಲ್ಲೇ ಭಾನುವಾರ ಠಾಣೆಗೆ ಬಂದ ಅವರನ್ನು ಬಂಧಿಸಿ ವಿಚಾರಣೆ ನಡೆಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಕನ್ನಡಪರ ಸಂಘಟನೆಗಳು ಠಾಣೆ ಮುಂದೆ ಜಮಾಯಿಸಿ, ಮಹಿಳೆಯನ್ನು ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದವು.

ಕೋಪದಲ್ಲಿ ಹೊಡೆದೆ:

ಆಸ್ಪತ್ರೆಗೆ ತೆರಳಿ ವಾಪಸ್ ಬರುತ್ತಿದ್ದೆ. ಆಗ ನನ್ನ ದ್ವಿಚಕ್ರ ವಾಹನಕ್ಕೆ ಆಟೋ ತಾಗಿತು. ಈ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಚಾಲಕ ಸರಿಯಾಗಿ ರೀತಿಯಲ್ಲಿ ವರ್ತಿಸಲಿಲ್ಲ. ಹಾಗಾಗಿ ಕೋಪದಲ್ಲಿ ಚಪ್ಪಲಿಯಲ್ಲಿ ಹೊಡೆದಿದ್ದೇನೆ ಎಂದು ಮಹಿಳೆ ವಿಚಾರಣೆ ವೇಳೆ ತಿಳಿಸಿದ್ದಾರೆ.

ಮಹಿಳೆಯ ಹೇಳಿಕೆ ದಾಖಲಿಸಿಕೊಂಡು, ಕರೆದಾಗ ವಿಚಾರಣೆಗೆ ಹಾಜರಾಗುವಂತೆ ಹೇಳಿ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net