ಮಹಿಳೆ ಮೇಲೆ ಸೊಸೆಯಿಂದಲೇ ಹಲ್ಲೆ: ವಿಡಿಯೋ ವೈರಲ್

Assault
Published on

ಹೈದರಾಬಾದ್: ಮಹಿಳೆಯೊಬ್ಬರ ಮೇಲೆ ಆಕೆಯ ಸೊಸೆ ಮತ್ತು ಅವಳ ತಾಯಿ ಸೇರಿಕೊಂಡು ಹಲ್ಲೆ ಮಾಡಿದ ಘಟನೆ ತೆಲಂಗಾಣದಲ್ಲಿ ನಡೆದಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹೈದರಾಬಾದ್‌ನ ಹುಮಾಯೂನ್ ನಗರದಲ್ಲಿರುವ ಮನೆಯಲ್ಲಿ ಈ ಘಟನೆ ಅಕ್ಟೋಬರ್ 8ರಂದು ನಡೆದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಗುವೊಂದು ಮೊಬೈಲ್ ಫೋನ್ ಹಿಡಿದುಕೊಂಡು ಈ ಹಲ್ಲೆಯ ಘಟನೆಯನ್ನು ಚಿತ್ರೀಕರಿಸುತ್ತಿರುವುದು ನೆಟ್ಟಿಗರ ಗಮನ ಸೆಳೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net