ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ: ವರದಕ್ಷಿಣೆ ಕಿರುಕುಳ ಆರೋಪ ಮಾಡುತ್ತಿರುವ ಪಾಲಕರು

Crime Logo
Published on

ಬೆಂಗಳೂರು: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಘಟ್ಟಪುರ ಸಮೀಪದಲ್ಲಿ ಮನೆಯೊಂದರಲ್ಲಿ ನಡೆದಿದೆ.
ರಾಮನಗರ ಮೂಲದ ರಾಧಾ(೨೪) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈ ಸಂಬಂಧ ಆಕೆಯ ಪಾಲಕರು ರಾಧಾಳ ಪತಿ ರವಿ ಮತ್ತು ಆತನ ಕುಟುಂಬದ ವಿರುದ್ಧ ವರದಕ್ಷಿಣಿ ಕಿರುಕುಳ ಮತ್ತು ಕೊಲೆ ಆರೋಪ ಮಾಡಿದ್ದಾರೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ರವಿ ಎರಡು ವರ್ಷಗಳ ಹಿಂದೆ ರಾಮನಗರ ಮೂಲದ ರಾಧಾರನ್ನು ಮದುವೆಯಾಗಿದ್ದ. ಆರಂಭದಲ್ಲಿ ಉತ್ತಮವಾಗಿದ್ದ ದಂಪತಿ ನಡುವೆ ಇತ್ತೀಚೆಗೆ ವೈಮನಸ್ಸು ಉಂಟಾಗಿದೆ. ಪ್ರತಿ ನಿತ್ಯ ಮನೆಯಲ್ಲಿ ಜಗಳ ಮಾಡುತ್ತಿದ್ದರು. ಬುಧವಾರ ರಾತ್ರಿ ಕೂಡ ಇಬ್ಬರ ನಡುವೆ ಜಗಳ ಉಂಟಾಗಿದೆ. ಅದರಿಂದ ಬೇಸತ್ತ ಆಕೆ, ಮನೆಯ ಕೊಠಡಿಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮರಣೋತ್ತರ ವರದಿ ಬಂದ ಬಳಿಕ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಗೊತ್ತಾಗಲಿದೆ. ಸದ್ಯ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net