ರೀಲ್ಸ್​​ಗಾಗಿ ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಮಹಿಳೆ! ನೋಟಿಸ್ ಜಾರಿ ಮಾಡಿದ ಪೊಲೀಸರು

video viral
Published on

ಉತ್ತರ ಪ್ರದೇಶ: ಇತ್ತೀಚಿನ ದಿನಗಳಲ್ಲಿ ಅನೇಕರು ಪ್ರಸಿದ್ಧರಾಗಲು ಪ್ರಯತ್ನಿಸುತ್ತಿದ್ದಾರೆ. ಸೋಶಿಯಲ್​​ ಮೀಡಿಯಾದಲ್ಲಿ ಅತೀ ಹೆಚ್ಚು ವೀಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಹಲವು ವಿಡಿಯೋಗಳನ್ನು ನಾವು ಈಗಾಗಲೇ ನೋಡಿದ್ದೇವೆ. ಇತ್ತೀಚಿಗೆ ಇಂತಹದೊಂದು ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ.

ರೀಲ್ಸ್​ಗಾಗಿ ಉತ್ತರ ಪ್ರದೇಶದಲ್ಲಿ ಯುವತಿಯೊಬ್ಬಳು ರಸ್ತೆ ಮಧ್ಯೆದಲ್ಲಿ ನೃತ್ಯ ಮಾಡಿದ್ದಾಳೆ. ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಹಿಡಿಶಾಪ ಹಾಕಿದ್ದಾರೆ.

ಮಹಿಳೆಯೊಬ್ಬರು ಮಳೆಯಲ್ಲೇ ಪಾದಚಾರಿ ಮಾರ್ಗದಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ರಸ್ತೆಯಲ್ಲಿ ಮಹಿಳೆ ಮಾಡಿದ ಅಪಾಯಕಾರಿ ಸಾಹಸಕ್ಕೆ ಟೀಕೆಗಳ ಮಹಾಪೂರವೇ ಹರಿದು ಬರುತ್ತಿದೆ.

ಮಹಿಳೆ ಮೊದಲು ಕಾರಿನಿಂದ ಕೆಳಗೆ ಇಳಿದು ಡ್ಯಾನ್ಸ್ ಮಾಡತೊಡಗಿದಳು. ಹಿಂದಿನಿಂದ ಬೇರೆ ವಾಹನಗಳು ಬರುತ್ತಿದ್ದರೂ ಎಲ್ಲರೂ ಅವಳನ್ನೇ ನೋಡುತ್ತಿದ್ದರೂ ನಾಚಿಕೆಯಿಲ್ಲದೆ ಹಾರಿ ಕುಣಿದಾಡಿದಳು.

ಎಲ್ಲರೂ ಮಳೆಯಲ್ಲಿ ಪಡುವ ಪಾಡು ಅನುಭವಿಸುತ್ತಿರುವಾಗ ಈ ಮಹಿಳೆ ಮಳೆಯಲ್ಲಿ ಹಾಯಾಗಿ ಎಂಜಾಯ್ ಮಾಡುತ್ತಾ ಎಲ್ಲರಿಗಿಂತ ಭಿನ್ನವಾಗಿ ವರ್ತಿಸಿದ್ದಾಳೆ. ನೆಟ್ಟಿಗರು ಇಂತಹ ಡ್ಯಾನ್ಸ್ ನೋಡಿಲ್ಲ ಎಂದು ಕಮೆಂಟ್ ಮಾಡುತ್ತಿದ್ದಾರೆ.

ನೆಟಿಜನ್ ಶೇರ್ ಮಾಡಿರುವ ಈ ವಿಡಿಯೋಗೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಪೊಲೀಸರು ಆಕೆಯ ಕಾರ್ ನಂಬರ್ ಕಳುಹಿಸುವಂತೆ ಹೇಳಿದ್ದಾರೆ. ಆಕೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದರು. ನಂತರ ಈ ವಿಡಿಯೋ ಬಗ್ಗೆ ಯುಪಿ ಪೊಲೀಸರು ಕೂಡ ಪ್ರತಿಕ್ರಿಯಿಸಿದ್ದಾರೆ. ಮಹಿಳೆಯರಿಗೆ ಲೀಗಲ್ ನೋಟಿಸ್ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net